ಆನೇಕಲ್ :ಪೋಕ್ಸೊ ಕಾಯ್ದೆಯಡಿ ಬಂಧಿತನಾಗಿದ್ದ ಆರೋಪಿಯೋರ್ವ ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ. ಮೃತನನ್ನ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ನೆರಳೂರು ಮೂಲದ ದೀಪು ಎಂದು ಗುರುತಿಸಲಾಗಿದೆ.
ಪೋಕ್ಸೊ ಕಾಯ್ದೆಯಡಿ ಬಂಧಿತ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ - An accused in Posco Act commits suicide in prison
ಪೋಕ್ಸೊ ಕಾಯ್ದೆಯಡಿ ಬಂಧಿತನಾಗಿದ್ದ ಆರೋಪಿಯೋರ್ವ ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ. ಆತ್ಮಹತ್ಯೆಗೈದ ಆರೋಪಿಯನ್ನು ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ನೆರಳೂರು ಮೂಲದ ದೀಪು ಎಂದು ಗುರುತಿಸಲಾಗಿದೆ.
ಪೋಸ್ಕೋ ಕಾಯ್ದೆಯಡಿ ಬಂಧಿತ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ
ಕಳೆದ ತಿಂಗಳ 20ರಂದು ಆರೋಪಿ ದೀಪು ತನ್ನ ಕಾರಿನಲ್ಲಿ ಅತ್ತಿಬೆಲೆಗೆ ಎರಡು ವರ್ಷದ ಮಗುವನ್ನು ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದ ಎಂದು ಹೇಳಲಾಗಿದೆ. ಬಳಿಕ ಮಗು ಅಸ್ವಸ್ಥಗೊಂಡು ಸಾವನ್ನಪ್ಪಿತ್ತು. ಈ ಬಗ್ಗೆ ಕೇಸ್ ದಾಖಲಿಸಿಕೊಂಡ ಅತ್ತಿಬೆಲೆ ಪೊಲೀಸರು ಮಗುವಿನ ಮೇಲೆ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿ ದೀಪುನನ್ನು ಬಂಧಿಸಿದ್ದರು. ಆದರೆ, ಆರೋಪಿ ದೀಪು ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಓದಿ :ಗೂಗಲ್ ಮೂಲಕ ಮಾಹಿತಿ ಪಡೆದು ಮಾದಕ ದಂಧೆ : ಸಿಸಿಬಿ ಬಲೆಗೆ ಬಿದ್ದ ಸೆಕ್ಯುರಿಟಿ ಗಾರ್ಡ್
Last Updated : Apr 10, 2022, 2:44 PM IST