ಬೆಂಗಳೂರು :ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿ ಕೋಟ್ಯಂತರ ರೂಪಾಯಿ ಮೌಲ್ಯದ ರೇಂಜ್ ರೋವರ್ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ದೂರು ನೀಡಿದ ಶ್ರೀನಿವಾಸ್ ನಾಯ್ಡು ಎಂಬುವರು ದಿ.ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ವಂಚನೆ ಆರೋಪಿ ಮಾಡಿ, ದೂರು ನೀಡಿದ್ದಾರೆ.
ಶ್ರೀನಿವಾಸ್ ನಾಯ್ಡು ನೀಡಿದ ದೂರಿನ ಮೇರೆಗೆ ಗಂಭೀರ ಸ್ವರೂಪವಲ್ಲದ ದೂರು (ಎನ್ಸಿಆರ್) ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕಳೆದ ಅ.19ರ ರಾತ್ರಿ ಮನೆಯ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ರೇಂಜ್ ರೋವರ್ ಕಾರಿನ ಮುಂಭಾಗಕ್ಕೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದರು.
ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಈ ಘಟನೆ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಘಟನೆಯ ಹಿಂದೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕೈವಾಡವಿದೆ ಎನ್ನಲಾಗುತ್ತಿದೆ.