ಬೆಂಗಳೂರು:ರೆಬೆಲ್ ಸ್ಟಾರ್ ಅಂಬರೀಶ್ ಅವರ ಮೂರನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬಿ ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಇದರ ಜೊತೆಗೆ ಕಂಠೀರವ ಸ್ಟುಡಿಯೋ ಬಳಿ ಅಂಬಿ ಅಭಿಮಾನಿಗಳು ಅನ್ನದಾನ ಏರ್ಪಡಿಸಿದ್ದಾರೆ.
ಅಂಬಿ 3ನೇ ವರ್ಷದ ಪುಣ್ಯಸ್ಮರಣೆ: ಸಮಾಧಿಗೆ ಕುಟುಂಬಸ್ಥರಿಂದ ಪೂಜೆ - ಅಂಬಿ ಸಮಾಧಿಗೆ ಕುಟುಂಬಸ್ಥರಿಂದ ಪೂಜೆ
ಸ್ಯಾಂಡಲ್ವುಡ್ನ ರೆಬೆಲ್ಸ್ಟಾರ್ ಅಂಬರೀಶ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಇಂದು ನಡೆಯುತ್ತಿದ್ದು, ಕುಟುಂಬಸ್ಥರಿಂದ ಪೂಜೆ ನಡೆಯಿತು.
ಅಂಬಿ ಮೂರನೇ ವರ್ಷದ ಪುಣ್ಯಸ್ಮರಣೆ, ಅಂಬಿ ಸಮಾಧಿಗೆ ಪೂಜೆ,
ಅಂಬಿ ಸಮಾಧಿಗೆ ಪೂಜೆ ಸಲ್ಲಿಕೆ ವೇಳೆ ಹಿರಿಯ ನಟ ದೊಡ್ಡಣ್ಣ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹಾಗೂ ಹಲವು ಗಣ್ಯರು ಭಾಗವಹಿಸಿದ್ದಾರೆ. ಇಷ್ಟೇ ಅಲ್ಲದೇ ಅಂಬಿ ಪುಣ್ಯಸ್ಮರಣೆ ಪ್ರಯುಕ್ತ ಸಾಕಷ್ಟು ಅಭಿಮಾನಿಗಳು ಕೂಡಾ ಕಂಠೀರವ ಸ್ಟುಡಿಯೋ ಬಳಿ ಆಗಮಿಸುತ್ತಿದ್ದಾರೆ.
ಇದನ್ನೂ ಓದಿ:'ಅತ್ರಂಗಿ ರೇ' ಫಸ್ಟ್ ಮೋಷನ್ ಪೋಸ್ಟರ್ ರಿಲೀಸ್
Last Updated : Nov 24, 2021, 11:04 AM IST