ಕರ್ನಾಟಕ

karnataka

ETV Bharat / city

ಜುಲೈ 11, 12 ರಂದು ಕರಾವಳಿ-ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ - Red Alert Declaration on coastal and southern inland

ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 13 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜುಲೈ 11 ಮತ್ತು 12 ರಂದು ಕರಾವಳಿ-ದಕ್ಷಿಣ ಒಳನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮಳೆ
rain

By

Published : Jul 9, 2021, 7:56 PM IST

ಬೆಂಗಳೂರು: ಬಂಗಾಳ ಕೊಲ್ಲಿಯ ಪಶ್ಚಿಮ ಮಧ್ಯಭಾಗದಲ್ಲಿ ಜುಲೈ 11ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 13 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗುಸಹಿತ ಅತಿ ಹೆಚ್ಚು ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜುಲೈ 10 ಮತ್ತು 13 ರಂದು ಆರೆಂಜ್ ಅಲರ್ಟ್ ಮತ್ತು ಜುಲೈ 11 ಮತ್ತು 12 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್: ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಹಾಗಾಗಿ ಜುಲೈ 10 ರಿಂದ 13ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೆಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ನೈರುತ್ಯ ಮುಂಗಾರು ರಾಜ್ಯದಲ್ಲಿ ಶುಕ್ರವಾರ ಸಾಮಾನ್ಯವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲಾ ಕಡೆಗಳಲ್ಲಿ ಇಂದು ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಮಳೆಯಾಗಿದೆ.

ಮುಖ್ಯವಾಗಿ ಮಂಗಳೂರಿನ ಪಣಂಬೂರಿನಲ್ಲಿ 15 ಸೆಂ.ಮೀ, ಮಂಗಳೂರಿನಲ್ಲಿ 8 ಸೆಂ.ಮೀ, ಕೋಲಾರ 6 ಸೆಂ.ಮೀ, ಕೊಪ್ಪಳ ಜಿಲ್ಲೆಯ ಕುಕ್ಕನೂರಿನಲ್ಲಿ 5 ಸೆಂ.ಮೀ. ಮಳೆಯಾಗಿದೆ. ಉಳಿದಂತೆ ಕಲಬುರಗಿ, ಆಳಂದದಲ್ಲಿ 4 ಸೆಂ.ಮೀ, ಶಿರಾಲಿ, ಮುಲ್ಕಿ, ಧರ್ಮಸ್ಥಳ, ಉಡುಪಿಯ ಕೋಟ, ಕೋಲಾರದ ಶ್ರೀನಿವಾಸಪುರ, ಶಿವಮೊಗ್ಗದ ಹುಂಚದಕಟ್ಟೆ, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ.

ABOUT THE AUTHOR

...view details