ಬೆಂಗಳೂರು: ಸದನದಲ್ಲಿ ಡಿ.ಕೆ.ಶಿವಕುಮಾರ್ ಈಗಲೇ ಗೂಂಡಾ ವರ್ತನೆ ತೋರುತ್ತಿದ್ದಾರೆ. ಇನ್ನು ಸಿಎಂ ಆದರೆ ರಾಜ್ಯವನ್ನೇ ಗುಂಡಾ ರಾಜ್ಯವನ್ನಾಗಿ ಮಾಡ್ತಾರೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಕಿಡಿಕಾರಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಷ್ಟ್ರಧ್ವಜ ಇಳಿಸಿ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸ್ತೇವೆ ಅಂತಾ ಈಶ್ವರಪ್ಪ ಹೇಳಿಲ್ಲ. ಮುಂದೊಂದು ದಿನ ಕೇಸರಿ ಧ್ವಜ ಹಾರಬಹುದು ಎಂದಿದ್ದಾರೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದವರು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ. ಹುಬ್ಬಳ್ಳಿ, ಕಾಶ್ಮೀರದ ಶ್ರೀನಗರದಲ್ಲಿ ಬಿಜೆಪಿ ರಾಷ್ಟ್ರಧ್ವಜ ಹಾರಿಸಲು ಮುಂದಾದಾಗ ಗುಂಡು ಹಾರಿಸಿದವರು ಕಾಂಗ್ರೆಸ್ನವರು. ರಾಷ್ಟ್ರಧ್ವಜದ ಬಗ್ಗೆ ಕಾಂಗ್ರೆಸ್ನವರಿಗೆ ಗೌರವ ಇಲ್ಲ ಎಂದು ವಾಗ್ದಾಳಿ ನಡೆಸಿದರು.