ರಸ್ತೆ ಸುರಕ್ಷತಾ ಶಿಬಿರ: 40 ಮಂದಿ ಪೋಷಕರಿಗೆ ಸಂಚಾರ ನಿಯಮದ ಜಾಗೃತಿ - ಬೆಂಗಳೂರು ಪೊಲೀಸ್
ಬೆಂಗಳೂರಿನಲ್ಲಿ ಪದೇ ಪದೆ ಸಂಚಾರ ನಿಮಯಗಳು ಉಲ್ಲಂಘನೆಯಾಗುತ್ತಿದ್ದು, ಇದರಲ್ಲಿ ವೀಲಿಂಗ್ ಮಾಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂಚಾರ ನಿಯಮಗಳನ್ನು ಪಾಲಿಸುವ ಬಗ್ಗೆ ಪೊಲೀಸರು ಪೋಷಕರಿಗೆ ಜಾಗೃತಿ ಶಿಬಿರ ಹಮ್ಮಿಕೊಂಡಿದ್ದಾರೆ.
ಬೆಂಗಳೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ವೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಹೆಗಡೆ ನಗರದ ಥಣಿಸಂದ್ರ ರಸ್ತೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಏರಿಕೆಯಾಗುತ್ತಲೇ ಇವೆ. ಈ ಕಾರಣದಿಂದ ಸಂಚಾರ ಪೊಲೀಸರು, ಸಂಚಾರ ತರಬೇತಿ ಮತ್ತು ರಸ್ತೆ ಸುರಕ್ಷತೆ ಸಂಸ್ಥೆಯಲ್ಲಿ ನಿನ್ನೆ ಪೋಷಕರಿಗಾಗಿ ಒಂದು ದಿನದ ತರಬೇತಿ ಶಿಬಿರ ಏರ್ಪಡಿಸಲಾಗಿತ್ತು.
ಈ ಶಿಬಿರಲ್ಲಿದಲ್ಲಿ 40 ಮಂದಿ ಪೋಷಕರು ಪಾಲ್ಗೊಂಡಿದ್ದರು. ಸಂಚಾರ ನಿಯಮ ಉಲ್ಲಂಘಿಸಿದರೆ ಇರುವ ದಂಡ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಂಚಾರ ಪೊಲೀಸರು ಜಾಗೃತಿ ಮೂಡಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಪೂರ್ವ ವಿಭಾಗದಲ್ಲಿ 55 ವೀಲಿಂಗ್ ಪ್ರಕರಣಗಳು ದಾಖಲಾಗಿದ್ದು, ಕೆಲವರು ಅಪ್ರಾಪ್ತ ವಯಸ್ಕರು ಸೇರಿದ್ದಾರೆ ಎಂದು ಸಂಚಾರ ಪೊಲೀಸರು ತಿಳಿಸಿದರು.