ಬೆಂಗಳೂರು : ಸಾರಿಗೆ ಉದ್ದಿಮೆಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಸರ್ಕಾರ ಸ್ಟೇಜ್ ಕ್ಯಾರೇಜ್ ಮತ್ತು ಕಾಂಟ್ರಾಕ್ಟ್ ಕ್ಯಾರೇಜ್ ವಾಹನಗಳಿಗೆ ರಸ್ತೆ ತೆರಿಗೆ ಪಾವತಿಸಲು ಒಂದು ತಿಂಗಳ ಕಾಲಾವಕಾಶ ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು, ಆಗಸ್ಟ್ 15ರಂದು ಪಾವತಿಸಬೇಕಿದ್ದ ರಸ್ತೆ ತೆರಿಗೆಯನ್ನು ಸೆಪ್ಟೆಂಬರ್ 15ರವರೆಗೆ ಹಾಗೂ ಸೆಪ್ಟೆಂಬರ್ 15ರಂದು ಪಾವತಿಸಬೇಕಿದ್ದ ರಸ್ತೆ ತೆರಿಗೆಯನ್ನು ಅಕ್ಟೋಬರ್ 15ರವರೆಗೆ ದಂಡರಹಿತವಾಗಿ ಪಾವತಿಸಲು ವಿಸ್ತರಿಸಲಾಗಿದೆ. ಇದರಿಂದ ಸುಮಾರು 40 ಸಾವಿರ ಬಸ್ ಮಾಲೀಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.