ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಸೂರ್ ಖಾನ್ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಲಿದೆ.
ಮನ್ಸೂರ್ ಖಾನ್ ಕಸ್ಟಡಿ ಇಂದು ಮುಕ್ತಾಯವಾಗುತ್ತಿರುವ ಹಿನ್ನೆಲೆ ಮತ್ತೆ ಸಿಬಿಐ ನ್ಯಾಯಾಲಯಕ್ಕೆ ಹಾಜರು ಪಡಿಸಲಿದೆ. ಮಾಜಿ ಸಚಿವ ರೋಷನ್ ಬೇಗ್ ಬಂಧನದ ಹಿನ್ನೆಲೆ ಮುಖಾಮುಖಿಯಾಗಿ ಇಬ್ಬರನ್ನು ವಿಚಾರಣೆ ನಡೆಸಲು ಸಿಬಿಐ ಕಸ್ಟಡಿಗೆ ಪಡೆದಿತ್ತು. ಆದರೆ ಸದ್ಯಕ್ಕೆ ರೋಷನ್ ಬೇಗ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕಾರಣ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೋಷನ್ ಬೇಗ್ ಗುಣಮುಖರಾದ ನಂತರ ಮುಖಾಮುಖಿಯಾಗಿ ಇಬ್ಬರನ್ನು ವಿಚಾರಣೆ ನಡೆಸಲಿದ್ದಾರೆ.