ಬೆಂಗಳೂರು :ಹಳೆ ದ್ವೇಷದ ಹಿನ್ನೆಲೆ ಜೈಲಿನಿಂದ ಹೊರಬಂದ ಎರಡೇ ತಿಂಗಳಿನಲ್ಲಿ ವ್ಯಕ್ತಿಯನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ.
ಜೈಲಿನಿಂದ ಹೊರಬಂದ ಎರಡೇ ತಿಂಗಳಲ್ಲಿ ಬೀದಿ ಹೆಣವಾದ ರೌಡಿಶೀಟರ್! - ಬೆಂಗಳೂರು ಸುದ್ದಿ
2019ರಲ್ಲಿ ಡಿಜಿ ಹಳ್ಳಿಯ ವ್ಯಕ್ತಿಯೋರ್ವನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಮೇ ತಿಂಗಳಿನಲ್ಲಿ ಜೈಲಿನಿಂದ ಬಿಡುಗಡೆಗೊಂಡಿದ್ದ. ಈತನ ಮೇಲೆ ಈಗಾಗಲೇ ಕೊಲೆ ಪ್ರಕರಣ ದಾಖಲಾಗಿದೆ..
ಸುರೇಶ್ ಎಂಬಾತ ಕೊಲೆಯಾದ ರೌಡಿ. ಕೊತ್ತನೂರು ಬೈರತಿ ಬಂಡೆ ಬಳಿ ಮೊನ್ನೆ ರಾತ್ರಿ ಆರೋಪಿಗಳು ಈತನನ್ನು ಕೊಲೆ ಮಾಡಿ ನಿರ್ಜನ ಪ್ರದೇಶದಲ್ಲಿ ಎಸೆದು ಹೋಗಿದ್ದರು. ಇಂದು ಈ ಪ್ರದೇಶದಲ್ಲಿ ತೆರಳುತ್ತಿದ್ದ ಸಾರ್ವಜನಿಕನೋರ್ವ ಮೃತ ದೇಹ ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾನೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಬಗ್ಗೆ ತನಿಖೆಗೆ ಇಳಿದಾಗ ಕೊಲೆಯಾದವ ಪೂರ್ವ ವಿಭಾಗದ ರೌಡಿಶೀಟರ್ ಅನ್ನೋದು ಗೊತ್ತಾಗಿದೆ. ಸದ್ಯ ಪೊಲೀಸರು ಆರೋಪಿಗಳಿಗೆ ಶೋಧ ಮುಂದುವರೆಸಿದ್ದಾರೆ.
ಈ ಬಗ್ಗೆ ಈಶಾನ್ಯ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಮಾತನಾಡಿ, ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ಕೊಲೆ ಮಾಡಲಾಗಿದೆ. ಕೊಲೆಯಾದ ಸುರೇಶ್, ಡಿಜಿಹಳ್ಳಿ ಠಾಣಾ ವ್ಯಾಪ್ತಿಯ ಕಾವಲು ಬೈರಸಂದ್ರ ನಿವಾಸಿ. 2019ರಲ್ಲಿ ಡಿಜಿ ಹಳ್ಳಿಯ ವ್ಯಕ್ತಿಯೋರ್ವನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಮೇ ತಿಂಗಳಿನಲ್ಲಿ ಜೈಲಿನಿಂದ ಬಿಡುಗಡೆಗೊಂಡಿದ್ದ. ಈತನ ಮೇಲೆ ಈಗಾಗಲೇ ಕೊಲೆ ಪ್ರಕರಣ ದಾಖಲಾಗಿದೆ. ಸದ್ಯ ಹಳೆ ದ್ವೇಷದ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ಇದ್ದು, ಎರಡು ವಿಶೇಷ ತಂಡ ರಚನೆ ಮಾಡಿ ಆರೋಪಿಗಳಿಗೆ ಶೋಧ ಕಾರ್ಯ ಮುಂದುವರಿದೆ ಎಂದರು.