ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅಪರಾಧ ಚಟುವಟಿಕೆಗಳು ಮತ್ತೆ ಹೆಚ್ಚಾಗಿವೆ. ಜೈಲಿನಿಂದ ಬಿಡುಗಡೆಯಾದ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಶನಿವಾರ ತಡರಾತ್ರಿ ಹೆಚ್ಎಎಲ್ ಪೊಲೀಸ್ ಠಾಣೆಯ LBS ನಗರದಲ್ಲಿ ನಡೆದಿದೆ.
ಅರವಿಂದ್(27) ಕೊಲೆಯಾದ ವ್ಯಕ್ತಿ. ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿದ್ದ ಈತ LBS ನಗರದ ಬಾಡಿಗೆ ಮನೆಯೊಂದರಲ್ಲಿ ಕುಟುಂಬದ ಸದಸ್ಯರೊಂದಿಗೆ ವಾಸವಿದ್ದ. ನಿನ್ನೆ ತಡ ರಾತ್ರಿ ದುಷ್ಕರ್ಮಿಗಳು ಬಾಡಿಗೆ ಮನೆಗೆ ಏಕಾಏಕಿ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಅರವಿಂದ್ನನ್ನು ಕೊಲೆ ಮಾಡಿ ಪರಾರಿ ಆಗಿದ್ದಾರೆ.