ಕರ್ನಾಟಕ

karnataka

ETV Bharat / city

ಉಪ ಚುನಾವಣೆ ಹಿನ್ನೆಲೆ: ಆರ್.ಆರ್.ನಗರ, ಶಿರಾ ಕ್ಷೇತ್ರದಲ್ಲಿ ರಜೆ ಘೋಷಣೆ - holiday in sira

ಚುನಾವಣೆ ಹಿನ್ನೆಲೆಯಲ್ಲಿ ಶಿರಾ ಮತ್ತು ಆರ್.ಆರ್.ನಗರ ಕ್ಷೇತ್ರಗಳಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಸೇರಿದಂತೆ ಕಾರ್ಖಾನೆಗಳಿಗೆ, ಖಾಸಗಿ ಕಂಪನಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

representative image
ಪ್ರಾತಿನಿಧಿಕ ಚಿತ್ರ

By

Published : Nov 2, 2020, 9:56 PM IST

ಬೆಂಗಳೂರು: ಶಿರಾ ಮತ್ತು ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರದಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳು ಸೇರಿದಂತೆ ಕಾರ್ಖಾನೆಗಳಿಗೆ, ಖಾಸಗಿ ಕಂಪನಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಸರ್ಕಾರದ ಅಧಿಸೂಚನೆ

ನೋಂದಾಯಿತ ಮತದಾರರಾಗಿರುವವರಿಗೆ ಮತದಾನ ಮಾಡಲು ಅನುಕೂಲವಾಗಲು ವೇತನ ಸಹಿತ ರಜೆ ಘೋಷಿಸಿ ಆದೇಶಿಸಲಾಗಿದೆ. ಅಲ್ಲದೆ ಎರಡೂ ಕ್ಷೇತ್ರದಲ್ಲಿ ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜತೆಗೆ ಮುನ್ನಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಸರ್ಕಾರದ ಅಧಿಸೂಚನೆ

ನವೆಂಬರ್ 10ರಂದು ಉಪ ಚುನಾವಣೆಯ ಫಲಿತಾಂಶ ಹೊರ ಬೀಳಲಿದ್ದು, ಆರ್.ಆರ್.ನಗರ ಕ್ಷೇತ್ರದ ಮತ ಎಣಿಕೆಯು ಶ್ರೀಜ್ಞಾನಕ್ಷಿ ವಿದ್ಯಾನಿಕೇತನದಲ್ಲಿ ನಡೆಯಲಿದೆ. ಶಿರಾ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯು ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್​​ನಲ್ಲಿ ನಡೆಯಲಿದೆ.

ABOUT THE AUTHOR

...view details