ಬೆಂಗಳೂರು:ನಗರದ ವಿವಿಧೆಡೆಯಿರುವ ಓಲಾ ಮತ್ತು ಊಬರ್ ಕಚೇರಿಗಳ ಮೇಲೆ ಆರ್ಟಿಒ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೈಸೆನ್ಸ್ ಪಡೆಯುವ ವಿಚಾರದಲ್ಲಿ ಲೋಪಗಳಾಗಿರುವುದು ಮತ್ತು ಪ್ರಯಾಣಿಕರಿಗೆ ಸೇವೆ ಒದಗಿಸುವ ವಿಚಾರದಲ್ಲಿ ತಪ್ಪುಗಳಾಗಿರುವ ಬಗ್ಗೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ, ಡ್ರೈವಿಂಗ್ ಲೈಸೆನ್ಸ್ ಇಲ್ಲದವರು ವಾಹನ ಚಾಲನೆ, ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಬಗ್ಗೆ ಪ್ರಯಾಣಿಕರಿಂದ ದೂರುಗಳು ಕೇಳಿಬಂದಿದ್ದವು. ಅಲ್ಲದೆ, ಕೆಲ ಮಾಲೀಕರು ಚಾಲಕರಿಗೂ ಸರಿಯಾಗಿ ಹಣ ಕೊಡುತ್ತಿಲ್ಲ ಎಂಬ ಆರೋಪಗಳಿದ್ದವು.