ಬೆಂಗಳೂರು: ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಈ ಎರಡು ರಾಜ್ಯಗಳಿಂದ ಬರುವ, ಸರಕು ಸಾಗಣೆ ವಾಹನಗಳ ಚಾಲಕರು ಹಾಗೂ ಸಹಾಯಕರುಗಳು ಕಡ್ಡಾಯವಾಗಿ ಆರ್ಟಿಪಿಸಿಆರ್ ಪರೀಕ್ಷೆಯ ವರದಿಯನ್ನು ಹೊಂದಿರಬೇಕು ಎಂದು ರಾಜ್ಯ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯ ಮಟ್ಟದ ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿಯ ಸಲಹೆ ಮೇರೆಗೆ ಚಾಲಕರು ಹಾಗೂ ಸಹಾಯಕರು 15 ದಿನಗಳಿಗೊಮ್ಮೆ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡುವುದು ಹಾಗೂ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.