ಕರ್ನಾಟಕ

karnataka

ETV Bharat / city

ಬಿಬಿಎಂಪಿ ಚುನಾವಣೆಗೆ ಜೆಡಿಎಸ್‍ ತಯಾರಿ: ಸಭೆಯಲ್ಲಿ ಗದ್ದಲ.. ಸಮಾಧಾನ ಮಾಡಿದ ಹೆಚ್​ಡಿಕೆ

ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಬೆಂಗಳೂರು ನಗರ ಜೆಡಿಎಸ್ ಪಕ್ಷದ ಅಧ್ಯಕ್ಷ ಆರ್. ಪ್ರಕಾಶ್ ರವರ ನೇತೃತ್ವದಲ್ಲಿ ಮುಂಬರುವ ಬಿಬಿಎಂಪಿ ಚುನಾವಣೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲು ಬೆಂಗಳೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‍ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳ ಸಭೆ ಕರೆಯಲಾಗಿತ್ತು. ಈ ವೇಳೆ ಗದ್ದಲ ಉಂಟಾಗಿದೆ.

JDS_Meeting
ಜೆಡಿಎಸ್‍ ಸಭೆಯಲ್ಲಿ ಗದ್ದಲ

By

Published : Jan 27, 2022, 4:26 PM IST

ಬೆಂಗಳೂರು: ಮುಂಬರುವ ಬಿಬಿಎಂಪಿ ಚುನಾವಣೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲು ಕರೆದಿದ್ದ ಸಭೆಯಲ್ಲಿ ಗದ್ದಲ ಉಂಟಾಗಿ ಜೆಡಿಎಸ್ ಬೆಂಗಳೂರು ಘಟಕದ ಅಧ್ಯಕ್ಷ ಆರ್. ಪ್ರಕಾಶ್ ರಾಜೀನಾಮೆ ನೀಡುವುದಾಗಿ ಹೇಳಿದ ಪ್ರಸಂಗ ನಡೆಯಿತು.

ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಬೆಂಗಳೂರು ನಗರ ಜೆಡಿಎಸ್ ಪಕ್ಷದ ಅಧ್ಯಕ್ಷ ಆರ್. ಪ್ರಕಾಶ್ ರವರ ನೇತೃತ್ವದಲ್ಲಿ ಮುಂಬರುವ ಬಿಬಿಎಂಪಿ ಚುನಾವಣೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲು ಬೆಂಗಳೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‍ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳ ಸಭೆ ಕರೆಯಲಾಗಿತ್ತು.

ಈ ವೇಳೆ ಕೋರ್ ಕಮಿಟಿಗೆ ಪ್ರಕಾಶ್ ಅವರನ್ನು ಸೇರಿಸದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರಿಂದ ಗದ್ದಲ ಉಂಟಾಯಿತು. ಇದೇ ವೇಳೆ ಕುಮಾರಸ್ವಾಮಿ ಅವರ ಮುಂದೆ ಪ್ರಕಾಶ್ ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು. ಸಭೆಯಲ್ಲೇ ರಾಜೀನಾಮೆ ನೀಡುವುದಾಗಿ ಹೇಳಿದರು. ಸಭೆಯಲ್ಲಿ ಗದ್ದಲ ಉಂಟಾಯಿತು. ಮಧ್ಯೆ ಪ್ರವೇಶಿಸಿದ ಹೆಚ್​ಡಿಕೆ ಅವರು, ಪ್ರಕಾಶ್ ಅವರನ್ನು ಸಮಾಧಾನ ಮಾಡಿದರು. ನಂತರ ಹೆಚ್​ಡಿಕೆ ತಮ್ಮ ಮಾತನ್ನು ಮುಂದುವರೆಸಿದರು.

ಇದನ್ನೂ ಓದಿ: ಫೆ.14-25ರವರೆಗೆ ಜಂಟಿ ಅಧಿವೇಶನ ಕರೆಯಲು ತೀರ್ಮಾನ: ಸಚಿವ ಮಾಧುಸ್ವಾಮಿ

ಬಳಿಕ ಬೆಂಗಳೂರು ವಿಧಾನಸಭೆಯ ಪ್ರತಿಕ್ಷೇತ್ರದ ಅಧ್ಯಕ್ಷರ ಅಭಿಪ್ರಾಯಗಳನ್ನು ಕೇಳಿದ ಕುಮಾರಸ್ವಾಮಿ, ನಂತರ ಬಿಬಿಎಂಪಿ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಸಂಘಟನೆ ಮಾಡುವಂತೆ ಮುಖಂಡರಿಗೆ ಸಲಹೆ, ಸೂಚನೆ ನೀಡಿದ್ದಾರೆ.

ಇಲ್ಲೊಮ್ಮೆ ನೋಡಿ - ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details