ಬೆಂಗಳೂರು: ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ನಗರದಲ್ಲಿ ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಆಚರಣೆಗಳ ಮೇಲೆ ಕಾರ್ಮೋಡ ಕವಿದಿದೆ. ಸೋಂಕು ಹರಡುವ ಆತಂಕವಿದ್ದು, ಮತ್ತೆ ಸಂಭ್ರಮಾಚರಣೆಗಳು ಮಂಕಾಗುವ ಸಾಧ್ಯತೆಗಳಿವೆ.
ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾತನಾಡಿ, ಸರ್ಕಾರದ ಆದೇಶವನ್ನು ಪಾಲನೆ ಮಾಡುತ್ತೇವೆ. ಎಲ್ಲ ರೀತಿಯ ಬಂದೋಬಸ್ತ್ ಕೈಗೊಳ್ಳಲಿದ್ದೇವೆ. ಒಮಿಕ್ರಾನ್ ಇರುವುದರಿಂದ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಾಗಿದೆ. ಎಲ್ಲವನ್ನೂ ಗಮನದಲ್ಲಿಡಬೇಕು ಎಂದರು.