ಬೆಂಗಳೂರು: ನಂಬಿದ ಸಿದ್ಧಾಂತಗಳೊಂದಿಗೆ ರಾಜಿಯಾಗಿಲ್ಲ, ರಾಜಿಯಾಗುವುದೂ ಇಲ್ಲ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ನಾನು ಭೇಟಿ ಮಾಡಿಲ್ಲ, ಅದರ ಅಗತ್ಯತೆಯೂ ನನಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
2020ರ ಫೆಬ್ರವರಿ 27ರಂದು ನಡೆದ ನನ್ನ ಜನ್ಮದಿನದ ಕಾರ್ಯಕ್ರಮ ಹೊರತುಪಡಿಸಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ನಾನು ವೈಯಕ್ತಿಕವಾಗಿ ಭೇಟಿ ಮಾಡಿಲ್ಲ. ಹಾಗೆ ಭೇಟಿ ಮಾಡುವ ಅಗತ್ಯವೂ ನನಗಿಲ್ಲ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ, ಪಕ್ಷದಲ್ಲಿ ನಾವು ಕಾರ್ಯ ನಿರ್ವಹಿಸುತ್ತಿದ್ದೇವೆ. ಈ ಗುರಿ ತಲುಪುವ ತನಕ ನಾನು ವಿಶ್ರಮಿಸುವುದಿಲ್ಲ ಎಂದು ಹೇಳಿದ್ದಾರೆ.