ಕರ್ನಾಟಕ

karnataka

ETV Bharat / city

ಹುಬ್ಬಳ್ಳಿ-ಅಂಕೋಲಾ ಮಧ್ಯೆ ಹೊಸ ಬ್ರಾಡ್​​​ಗೇಜ್ ರೈಲ್ವೆ ಮಾರ್ಗ ನಿರ್ಮಾಣಕ್ಕಾಗಿ ಪ್ರಧಾನಿಗೆ ದೇಶಪಾಂಡೆ ಪತ್ರ - ಹುಬ್ಬಳ್ಳಿ-ಅಂಕೋಲಾ ಹೊಸ ಬ್ರಾಡ್ ಗೇಜ್ ರೈಲ್ವೆ ಮಾರ್ಗ

ಹುಬ್ಬಳ್ಳಿ- ಅಂಕೋಲಾ ಹೊಸ ಬ್ರಾಡ್​​​ಗೇಜ್ ರೈಲ್ವೆ ಮಾರ್ಗ ನಿರ್ಮಾಣಕ್ಕಾಗಿ ಅನುಮತಿ ನೀಡುವಂತೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೆ ಶಾಸಕ ಆರ್.ವಿ.ದೇಶಪಾಂಡೆ ಅವರು ಪತ್ರ ಬರೆದಿದ್ದಾರೆ.

R.V.Deshpande
ಆರ್​.ವಿ.ದೇಶಪಾಂಡೆ

By

Published : Jun 6, 2020, 9:17 PM IST

ಬೆಂಗಳೂರು: ಹುಬ್ಬಳ್ಳಿ-ಅಂಕೋಲಾ ನಡುವೆ ನೂತನ ಬ್ರಾಡ್ ಗೇಜ್ ರೈಲ್ವೆ ಮಾರ್ಗ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಬೇಕು ಎಂದು ಶಾಸಕ ಆರ್.ವಿ. ದೇಶಪಾಂಡೆ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಧಾನಿ ಮೋದಿ ಹಾಗೂ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್ ಅವರಿಗೆ ಪತ್ರ ಬರೆದಿರುವ ಅವರು, ಈ ರೈಲು ಮಾರ್ಗಕ್ಕೆ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಡಿಗಲ್ಲು ಹಾಕಿದ್ದರು. ಜೊತೆಗೆ ಹುಬ್ಬಳ್ಳಿಯಿಂದ ಕಲಘಟಗಿವರೆಗೆ ಟ್ರ್ಯಾಕ್​​​ನ ಒಂದು ಭಾಗ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ.

ಮುಂದಿನ ಭಾಗದ ಕಾಮಗಾರಿಯು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಬರುವುದರಿಂದ ಕಾರವಾರ, ಯಲ್ಲಾಪುರ ಮತ್ತು ಧಾರವಾಡ ವಿಭಾಗದ ಸುಮಾರು 595.64 ಹೆಕ್ಟರ್​​ನಷ್ಟು ಅರಣ್ಯ ಭೂಮಿ ಉಪಯೋಗಿಸಬೇಕಾಗುತ್ತದೆ. ಹೀಗಾಗಿ, ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಬೇಕಾಗಿದ್ದು, ಈ ಪ್ರದೇಶದ ಬಳಕೆಗೆ ಅನುಮತಿ ನೀಡಬೇಕೆಂದು ಪತ್ರ ಬರೆದಿದ್ದಾರೆ.

ಕೇಂದ್ರಕ್ಕೆ ಬರೆದಿರುವ ಪತ್ರ

ಈಗಾಗಲೇ ರಾಜ್ಯ ವನ್ಯಜೀವಿ ಮಂಡಳಿಯಲ್ಲಿ ರೈಲು ಮಾರ್ಗ ನಿರ್ಮಾಣಕ್ಕೆ ಅರಣ್ಯ ಪ್ರದೇಶ ಬಳಕೆಗೆ ಅನುಮತಿ ನೀಡಲಾಗಿದ್ದು, ಸದರಿ ಪ್ರಸ್ತಾವನೆಯನ್ನು ಕೇಂದ್ರ ವನ್ಯಜೀವಿ ಮಂಡಳಿಗೆ ಅನುಮತಿಗಾಗಿ ಕಳುಹಿಸಲಾಗಿದೆ. ಹೀಗಾಗಿ, ನಮ್ಮ ರಾಜ್ಯದ ಕೇಂದ್ರ ಸಚಿವರೂ ಕೂಡಾ ಈ ವಿಷಯದ ಬಗ್ಗೆ ಕೇಂದ್ರ ಪರಿಸರ ಸಚಿವರಿಗೆ ಮನವರಿಕೆ ಮಾಡಿಕೊಟ್ಟು, ಅನುಮತಿ ನೀಡಲು ಒತ್ತಾಯಿಸಬೇಕೆಂದು ಕೋರುತ್ತೇನೆ ಎಂದಿದ್ದಾರೆ.

ABOUT THE AUTHOR

...view details