ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆ ರೌಡಿಶೀಟರ್ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತೈ ಮಾಡಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾರಾಯಿಪಾಳ್ಯದಲ್ಲಿ ನಡೆದಿದೆ.
ಹಳೇ ದ್ವೇಷ: ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ - sampigehalli rowdy sheeter murder
ರೌಡಿಶೀಟರ್ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತೈ ಮಾಡಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾರಾಯಿಪಾಳ್ಯದಲ್ಲಿ ನಡೆದಿದೆ. ಘಟನೆಗೆ ಹಳೇ ದ್ವೇಷ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.
ರೌಡಿಶೀಟರ್ ಹತ್ಯೆ
ತನ್ವಿರ್ ಮೃತ ರೌಡಿಶೀಟರ್. ಹಳೇ ದ್ವೇಷದ ಹಿನ್ನೆಲೆ ಹತ್ಯೆ ಮಾಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ತನ್ವಿರ್ ವಿರುದ್ಧ ಕೆ.ಜಿ.ಹಳ್ಳಿ, ಹೆಣ್ಣೂರು, ಶಿವಾಜಿನಗರ, ದೊಡ್ಡಬಳ್ಳಾಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ದುಷ್ಕರ್ಮಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.