ಕರ್ನಾಟಕ

karnataka

ETV Bharat / city

ಹಿರಿಯ ನಟ ಸತ್ಯಜಿತ್​​ ಅಂತಿಮ ದರ್ಶನಕ್ಕೆ ಸಿದ್ಧತೆ: ಸ್ಯಾಂಡಲ್​ವುಡ್​​ನಲ್ಲಿ ಮಡುಗಟ್ಟಿದ ಶೋಕ - ಸ್ಯಾಂಡಲ್​ವುಡ್ ಲೇಟೆಸ್ಟ್ ನ್ಯೂಸ್

ನಟ ಸತ್ಯಜಿತ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಹೆಗಡೆ ನಗರದ ನಿವಾಸಕ್ಕೆ ತರಲಾಗಿದ್ದು, ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ಏರ್ಪಾಡು ಮಾಡಲಾಗಿದೆ.

sandalwood-actor-satyajeet-death-updates
ಹಿರಿಯ ನಟ ಸತ್ಯಜಿತ್​​ ಅಂತಿಮ ದರ್ಶನಕ್ಕೆ ಸಿದ್ಧತೆ: ಸ್ಯಾಂಡಲ್​ವುಡ್​​ನಲ್ಲಿ ಮಡುಗಟ್ಟಿದ ಶೋಕ

By

Published : Oct 10, 2021, 11:19 AM IST

ಬೆಂಗಳೂರು:ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ನಟ ಸತ್ಯಜಿತ್ ನಿಧನರಾಗಿದ್ದಾರೆ. 72 ವರ್ಷದ ನಟ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಕಳೆದ ವಾರ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಹೆಗಡೆ ನಗರದ ಶಬರಿ ನಗರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆ ನಂತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇದೀಗ ಹೆಗೆಡೆ ನಗರದ ನಿವಾಸಕ್ಕೆ ಮೃತದೇಹ ಶಿಫ್ಟ್ ಆಗಿದ್ದು, ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಹೆಗಡೆ ನಗರದ ಖಬರಸ್ತಾನದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ:

ಸೈಯದ್​ ನಿಜಾಮುದ್ದೀನ್ ಹೆಸರಿನ ಇವರು ಚಿತ್ರರಂಗದಲ್ಲಿ ಸತ್ಯಜಿತ್ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದರು. 1986ರಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದು 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಅಪ್ಪು, ಅರಸು, ಆಪ್ತಮಿತ್ರ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿ ತನ್ನದೇ ಛಾಪು ಮೂಡಿಸಿದ್ದರು.

'ಸೆಕೆಂಡ್ ಹಾಫ್' ಕೊನೆಯ ಚಿತ್ರ:

ಸತ್ಯಜಿತ್ ಅವರಿಗೆ ಗ್ಯಾಂಗ್ರಿನ್ ಕಾಣಿಸಿಕೊಂಡ ಬಳಿಕ ಸಿನಿಮಾಗಳಲ್ಲಿ ನಟಿಸಲು ಬೇಡಿಕೆ ಕಡಿಮೆಯಾಗಿತ್ತು. 2018ರಲ್ಲಿ ತೆರೆಕಂಡ ಪ್ರಿಯಾಂಕಾ ಉಪೇಂದ್ರ ನಟನೆಯ 'ಸೆಕೆಂಡ್ ಹಾಫ್' ಚಿತ್ರದಲ್ಲಿ ವೀಲ್‌ಚೇರ್‌ನಲ್ಲಿ ಕುಳಿತುಕೊಂಡೇ ನಟಿಸಿದ್ದರು. ಆ ಬಳಿಕ ಬೇರೆ ಯಾವುದೇ ಸಿನಿಮಾದಲ್ಲಿ ಸತ್ಯಜಿತ್ ಕಾಣಿಸಿಕೊಂಡಿರಲಿಲ್ಲ. ಇವರು ಖಳನಟ, ಪೋಷಕ ನಟನಾಗಿಯೂ ಗುರುತಿಸಿಕೊಂಡಿದ್ದರು.

ಹಿರಿಯ ನಟನ ನಿಧನಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ:ಸ್ಯಾಂಡಲ್​ವುಡ್​ ಹಿರಿಯ ನಟ ಸತ್ಯಜಿತ್ ವಿಧಿವಶ

ABOUT THE AUTHOR

...view details