ದೊಡ್ಡಬಳ್ಳಾಪುರ: ರಾಜ್ಯ ಉಪಚುನಾವಣೆ ದಿನಾಂಕ ನಿಗದಿಯಾಗಿದ್ದು, ಹೊಸಕೋಟೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ.
ನನ್ನ ಮಗ ಸಹ ಹೊಸಕೋಟೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ.. ಸಂಸದ ಬಚ್ಚೇಗೌಡ - Hoskote constituency
ಹೊಸಕೋಟೆ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಚ್ಚೇಗೌಡರ ಮಗ ಶರತ್ ಬಚ್ಚೇಗೌಡ ಹೊಸಕೋಟೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ. ಆದರೆ, ಬಿಜೆಪಿಯಿಂದ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರನ್ನು ಕಣಕ್ಕಿಳಿಸುವ ಸಿದ್ಧತೆಯನ್ನ ಪಕ್ಷ ನಡೆಸಿದೆ ಎನ್ನಲಾಗಿದೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಚ್ಚೇಗೌಡರ ಮಗ ಶರತ್ ಬಚ್ಚೇಗೌಡ ಹೊಸಕೋಟೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ಬಿಜೆಪಿಯಿಂದ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರನ್ನು ಕಣಕ್ಕಿಳಿಸುವ ಸಿದ್ಧತೆಯನ್ನ ಪಕ್ಷ ನಡೆಸಿದೆ. ಹಾಗಾಗಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಯುವ ಸೂಚನೆ ನೀಡಿರುವ ಶರತ್, ಪಕ್ಷ ನೀಡಿದ ನಿಗಮ ಅಂಡಳಿ ಅಧ್ಯಕ್ಷ ಸ್ಥಾನವನ್ನೂ ನಿರಾಕರಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಂಸದ ಬಚ್ಚೇಗೌಡರು, ಅವನು ಬುದ್ದಿವಂತ ಜೊತೆಗೆ ವಿದ್ಯಾವಂತ. ಶರತ್ ನಿರ್ಧಾರ ಅವನಿಗೆ ಬಿಟ್ಟಿದ್ದು ಎನ್ನುವ ಮೂಲಕ ಮಗನ ಪರವಾಗಿ ಬ್ಯಾಟಿಂಗ್ ನಡೆಸಿದರು. ನಾನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದನಾಗಿರುವೆ. ಶರತ್ ಕೂಡ ಬಿಜೆಪಿ ಟಿಕೆಟ್ ನೀರಿಕ್ಷೆಯಲ್ಲಿದ್ದಾನೆ. ಅವನು ಹೈಕಮಾಂಡ್ ತೀರ್ಮಾನಕ್ಕೆ ಕಾಯುತ್ತಿದ್ದಾನೆ. ಚುನಾವಣೆ ಸ್ಪರ್ಧೆಯ ಬಗ್ಗೆ ಅವನೇ ತೀರ್ಮಾನ ಮಾಡ್ತಾನೆ ಅಂತಾ ಸಂಸದ ಬಚ್ಚೇಗೌಡರು ಮಗನ ಸ್ಪರ್ಧೆಯ ಗುಟ್ಟು ಎಲ್ಲಿಯೂ ಬಿಟ್ಟುಕೊಡದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.