ಬೆಂಗಳೂರು:ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ, ಪರಂಪರೆ ಮತ್ತು ಜಾನಪದಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ ಹಾಗೂ ಕರ್ನಾಟಕದ ಹಿತರಕ್ಷಣೆಗಾಗಿ ಶ್ರಮಿಸುತ್ತಿರುವ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ 107 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆ.
ಪಂಜಾಬ್ ಮೂಲದ ಸಿಖ್ ಧರ್ಮದ ಸರ್ದಾರ್ ಬಲ್ಜಿತ್ ಸಿಂಗ್ ಅವರನ್ನು 'ಸಿಖ್ ಸಮುದಾಯದ ಅಲ್ಪಸಂಖ್ಯಾತರ ಪ್ರತಿನಿಧಿ'ಯಾಗಿ ನೇಮಕ ಮಾಡಲಾಗಿದೆ. ಸರ್ದಾರ್ ಬಲ್ಜಿತ್ ಸಿಂಗ್ ಮೂಲತಃ ಪಂಜಾಬ್ನವರಾಗಿದ್ದು, ಹುಟ್ಟಿದ್ದು ಬೆಂಗಳೂರಿನಲ್ಲಿ. ಕನ್ನಡ ಭಾಷೆಯ ಕುರಿತು ಅಪಾರ ಗೌರವವನ್ನು ಹೊಂದಿರುವ ಸರ್ದಾರ್ ಬಲ್ಜಿತ್ ಸಿಂಗ್ ಕನ್ನಡವನ್ನು ಕಲಿತು ನಿರರ್ಗಳವಾಗಿ ಮಾತನಾಡುತ್ತಾರೆ. ಕನ್ನಡದಲ್ಲಿ ಬರೆಯುವುದನ್ನು ರೂಢಿಸಿಕೊಂಡಿದ್ದಾರೆ. ಅದರೊಂದಿಗೆ ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ.