ಕರ್ನಾಟಕ

karnataka

ETV Bharat / city

ಬಿಬಿಎಂಪಿ ಮೇಯರ್ ಚುನಾವಣೆ: ಕೈ​ ಅಭ್ಯರ್ಥಿಯಾಗಿ ಸತ್ಯನಾರಾಯಣ್ ಕಣಕ್ಕೆ

ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆಯ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೇಯರ್ ಅಭ್ಯರ್ಥಿಯಾಗಿ ಕಾಂಗ್ರೆಸ್​ನಿಂದ ಸತ್ಯನಾರಾಯಣ್ ಕಣಕ್ಕೆ ಇಳಿಯಲಿದ್ದಾರೆ.

ಸತ್ಯನಾರಾಯಣ್

By

Published : Oct 1, 2019, 5:39 AM IST

ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ಸತ್ಯನಾರಾಯಣ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ.

ಮಾಜಿ ಆಡಳಿತ ಪಕ್ಷದ ನಾಯಕ, ದತ್ತಾತ್ರೇಯ ದೇವಸ್ಥಾನ ವಾರ್ಡ್ ನಂ.77 ರ ಸದಸ್ಯರಾಗಿರುವ ಸತ್ಯನಾರಾಯಣ ಅವರೇ ಅಭ್ಯರ್ಥಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆದೇಶ ಹೊರಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿನ ಹಿರಿಯ ನಾಯಕರು, ಕಾರ್ಪೊರೇಟರ್​ಗಳು ಸಭೆಯಲ್ಲಿ ಪಾಲ್ಗೊಂಡು ಜೆಡಿಎಸ್ ಜತೆ ಈ ಸಾರಿಯೂ ಮೈತ್ರಿ ಮುಂದುವರಿಸುವ ನಿರ್ಧಾರ ಕೈಗೊಂಡಿದ್ದು, ಉಪಮೇಯರ್ ಸ್ಥಾನವನ್ನು ಜೆಡಿಎಸ್​ಗೆ ಬಿಟ್ಟುಕೊಡಲಾಗಿದೆ.

ಚುನಾವಣೆ ಹಿನ್ನೆಲೆ ಬಿಬಿಎಂಪಿ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿ ಸ್ಥಾನಗಳ ಚುನಾವಣೆಯು ಇಂದು ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ. ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಗರ ಪೊಲೀಸ್ ಆಯುಕ್ತರು ಕಚೇರಿ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ABOUT THE AUTHOR

...view details