ಬೆಂಗಳೂರು: ಪರಿಶಿಷ್ಟ ಸಮುದಾಯಕ್ಕೆ ಸೇರಿದ ಮಹಿಳೆಯರು ಹೆಚ್ಚಿನ ಕೌಶಲ್ಯ ಹೊಂದಿದವರಾಗಿದ್ದಾರೆ. ಪ. ಜಾತಿ ಮತ್ತು ಪಂಗಡಕ್ಕೆ ಸೇರಿದ ಮಹಿಳೆಯರನ್ನು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಟಾಟಾ ಸ್ಟೀಲ್ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಹಾಗೂ ನಡ್ಜ್ ಪ್ರತಿಷ್ಠಾನದ ಸದಸ್ಯರಾದ ಬಿ.ಮುತ್ತುರಾಮನ್ ನೇತೃತ್ವದ ನಿಯೋಗ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.
ಗೃಹ ಕಚೇರಿ ಕೃಷ್ಣಾದಲ್ಲಿ ಟಾಟಾ ಸ್ಟೀಲ್ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಹಾಗೂ ನಡ್ಜ್ ಪ್ರತಿಷ್ಠಾನದ ಸದಸ್ಯರ ಜೊತೆ ಸಿಎಂ ಈ ವೇಳೆ ಮಾತನಾಡಿದ ಸಿಎಂ, ಅತಿ ಹೆಚ್ಚು ತಲಾ ಆದಾಯ ಹೊಂದಿರುವ ಐದು ರಾಜ್ಯಗಳ ಪೈಕಿ ಕರ್ನಾಟಕವೂ ಒಂದು. ಈ ಕೊಡುಗೆ ನೀಡುವ ಶೇ.30ರಷ್ಟು ಮಹಿಳೆಯರು ಪರಿಶಿಷ್ಟ ಸಮುದಾಯದವರಾಗಿದ್ದು, ಕೌಶಲ್ಯವನ್ನು ಹೊಂದಿದವರಾಗಿದ್ದಾರೆ. ರಾಜ್ಯದಲ್ಲಿರುವ 7,500 ಸ್ವಸಹಾಯ ಗುಂಪುಗಳನ್ನು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಬೇಕು ಎಂದು ತಿಳಿಸಿದರು.
ನಡ್ಜ್ ಪ್ರತಿಷ್ಠಾನದ ಸಿ.ಇ.ಒ ಅತುಲ್ ಸತೀಜಾ ಮಾತನಾಡಿ, ಬಡತನವನ್ನು ನಿವಾರಿಸುವ ಉದ್ದೇಶದಿಂದ ನಡ್ಜ್ ಸಂಸ್ಥೆಯನ್ನು ಸ್ಥಾಪಿಸಲಾಗಿದ್ದು, ಕರ್ನಾಟಕವೂ ಸೇರಿದಂತೆ ಭಾರತದಾದ್ಯಂತ ಬಡತನ ನಿವಾರಣೆ ಮತ್ತು ಜೀವನೋಪಾಯದ ಮೂಲಕ ದೊಡ್ಡ ಪ್ರಮಾಣದ ಸಾಮಾಜಿಕ ಪರಿವರ್ತನೆ ತರುವುದಾಗಿದೆ ಹೇಳಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಟಾಟಾ ಸ್ಟೀಲ್ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಹಾಗೂ ನಡ್ಜ್ ಪ್ರತಿಷ್ಠಾನದ ಸದಸ್ಯರ ಜೊತೆ ಸಿಎಂ ಕಳೆದ 6 ವರ್ಷಗಳಲ್ಲಿ ಕೌಶಲ್ಯ ಅಭಿವೃದ್ಧಿ, ಸಾಮಾಜಿಕ ಉದ್ಯಮಶೀಲತೆ ಮತ್ತು ಗ್ರಾಮೀಣ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಡ್ಜ್ ಸಂಸ್ಥೆಯನ್ನು ಬೆಂಗಳೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಕೌಶಲ್ಯಾಭಿವೃದ್ಧಿಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಲು ಉತ್ಸುಕವಾಗಿರುವುದಾಗಿ ತಿಳಿಸಿದರು.
ನಡ್ಜ್ ಪ್ರತಿಷ್ಠಾನದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ವಿನೋದ್, ಸಿ.ಇ.ಒ ಅತುಲ್ ಸತೀಜಾ, ಸುಧಾ ಶ್ರೀನಿವಾಸನ್, ಯೋಜನಾ ಹಾಗೂ ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
ವಿವಿಧ ನಿಯೋಗ ಭೇಟಿ:ಉಬುಂಟು ಮಹಿಳಾ ಉದ್ಯಮಿಗಳ ಸಂಘದ ಸಂಸ್ಥಾಪಕರು ಹಾಗೂ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಉಬುಂಟು ಕಾರ್ಯದರ್ಶಿ ಜ್ಯೋತಿ ಬಾಲಕೃಷ್ಣ, ರಾಜಲಕ್ಷ್ಮಿ, ಖಜಾಂಚಿ ಲತಾ ಗಿರೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಉಪಸ್ಥಿತರಿದ್ದರು.
ಡಿಯಾಜಿಯೋ ಇಂಡಿಯಾ, ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಸಿ.ಇ.ಒ, ಹಿನಾ ನಾಗರಾಜನ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಸಂಸ್ಥೆಯ ಹಿರಿಯ ವ್ಯವಸ್ಥಾಪಕ ರವಿವರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.