ಬೆಂಗಳೂರು:ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಏಪ್ರಿಲ್ 16 ರಿಂದ ಮೇ6 ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಪಿಯು ಬೋರ್ಡ್ ತಿಳಿಸಿದೆ. ಈ ಹಿಂದೆ ತಾತ್ಕಾಲಿಕ ವೇಳಾಪಟ್ಟಿಯನ್ನ ಪ್ರಕಟಿಸಿದ್ದ ಪಿಯು ಬೋರ್ಡ್, ಪೋಷಕರು- ವಿದ್ಯಾರ್ಥಿಗಳಿಂದ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಇದೀಗ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಏಪ್ರಿಲ್ 16 ರಂದು ಗಣಿತಶಾಸ್ತ್ರ ವಿಷಯದ ಮೂಲಕ ಪರೀಕ್ಷೆ ಆರಂಭಗೊಳ್ಳಲಿವೆ.
ಕೋವಿಡ್- 19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಹಾಗೂ ವಿದ್ಯಾರ್ಥಿಗಳು ದ್ವಿತೀಯ ಪಿಯು ನಂತರ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ದಾಖಲಾಗಿ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಹಿತದೃಷ್ಟಿಯಿಂದ ಪಠ್ಯಕ್ರಮದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಭಾಷಾ ವಿಷಯಗಳಲ್ಲಿ ಕಳೆದ ಸಾಲಿನಲ್ಲಿ ಶೇ.30 ರಷ್ಟು ಪಠ್ಯಕ್ರಮ ಕಡಿತಗೊಳಿಸಲಾಗಿತ್ತು.
ನಂತರ 2021-22ನೇ ಸಾಲಿನಲ್ಲೂ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಭಾಷಾ ವಿಷಯಗಳಲ್ಲಿ ಶೇ.30 ರಷ್ಟು ಪಠ್ಯಕ್ರಮ ಕಡಿತಗೊಳಿಸಲಾಗಿದೆ. ಹೀಗಾಗಿ ಶೇ.70 ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ. 2021-22ನೇ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಐಚ್ಚಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲದೆ ಶೇ.100 ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.
ಐಚ್ಚಿಕ ವಿಷಯಗಳಲ್ಲಿ ಪ್ರಶ್ನೆಪತ್ರಿಕೆ ತಯಾರಿಸುವಾಗ ಹೆಚ್ಚು ಸಂಖ್ಯೆಯಲ್ಲಿ ಆಯ್ಕೆ ಪ್ರಶ್ನೆಗಳನ್ನು ನೀಡಿ ವಿದ್ಯಾರ್ಥಿಗಳು ತಮಗೆ ತಿಳಿದಿರುವ ಪ್ರಶ್ನೆಗಳನ್ನು ಆರಿಸಿಕೊಂಡು ಉತ್ತರಿಸುವ ಅವಕಾಶ ಕಲ್ಪಿಸಲಾಗಿದೆ.
ದ್ವಿತೀಯ ಪಿಯುಸಿ ವೇಳಾಪಟ್ಟಿ ಹೀಗಿದೆ
16-4-2022- ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ
18-4-2022- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
19-4-2022 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
20-4-2022 - ಇತಿಹಾಸ, ಭೌತಶಾಸ್ತ್ರ
21-4-2022- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್