ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಚಿವ ಸುರೇಶ್ ಕುಮಾರ್ ಸಿಹಿ ಸುದ್ದಿಯನ್ನು ನೀಡಿದ್ದಾರೆ. ತಜ್ಞರು ಸೂಚಿಸಿದ ಮಾನದಂಡಗಳ ಆಧಾರದ ಮೇಲೆ ಜುಲೈ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಜುಲೈ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ - ಸಚಿವ ಸುರೇಶ್ ಕುಮಾರ್ - ದ್ವಿತೀಯ ಪಿಯುಸಿ
ಜುಲೈ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಜುಲೈ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ - ಸಚಿವ ಸುರೇಶ್ ಕುಮಾರ್
ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ಜುಲೈ 30ರೊಳಗೆ ಫಲಿತಾಂಶ ಘೋಷಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಾಗಿ ಜುಲೈ ಎರಡನೇ ವಾರದಲ್ಲಿ ಫಲಿತಾಂಶ ನೀಡುವುದಾಗಿ ಸಚಿವರು ಸ್ಪಷ್ಟಪಡಿಸಿದರು.
ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಯಾವುದೇ ವಿದ್ಯಾರ್ಥಿ ಹೆಚ್ಚಿನ ಅಂಕದ ನಿರೀಕ್ಷೆ ಇದ್ದರೆ ಅವರಿಗೆ ಇನ್ನೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡುತ್ತೇವೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
Last Updated : Jun 28, 2021, 4:28 PM IST