ಕರ್ನಾಟಕ

karnataka

ETV Bharat / city

ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ - ಮಾರ್ಚ್ 4ರಿಂದ ಪರೀಕ್ಷೆ

ಪದವಿ ಪೂರ್ವ ಶಿಕ್ಷಣ ಇಲಾಖೆಯು 2019-20ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ‌ವೇಳಾಪಟ್ಟಿ ಪ್ರಕಟಿಸಿದೆ.

press release

By

Published : Oct 1, 2019, 8:37 PM IST

ಬೆಂಗಳೂರು:ಪದವಿ ಪೂರ್ವ ಶಿಕ್ಷಣ ಇಲಾಖೆಯು 2019-20ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ‌ವೇಳಾಪಟ್ಟಿ ಪ್ರಕಟಿಸಿದೆ.

ಮಾರ್ಚ್ 4ರಿಂದ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 19ಕ್ಕೆ ಎಲ್ಲಾ ವಿಷಯಗಳ ಪರೀಕ್ಷೆ ಮುಕ್ತಾಯಗೊಳ್ಳಲಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷೆಗಳು ನಡೆಯಲಿವೆ.

ವಿದ್ಯಾರ್ಥಿಗಳು ಹಾಗೂ ಪೋಷಕರು ತಾತ್ಕಾಲಿಕ ವೇಳಾಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಅವಕಾಶವನ್ನ ಇಲಾಖೆ ಕಲ್ಪಿಸಿದ್ದು, ಇಂದಿನಿಂದ ಅಕ್ಟೋಬರ್ 30ರ ಒಳಗೆ ಸಲ್ಲಿಸಬಹುದು ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details