ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 2022 ರ ಮಾರ್ಚ್ /ಏಪ್ರಿಲ್ ತಿಂಗಳಲ್ಲಿ ಅರ್ಜಿ ಸ್ವೀಕಾರ ಮಾಡಿತ್ತು. ಮೇ 21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು.
ಈ ನೇಮಕ ಪ್ರಕ್ರಿಯೆಯ ಗಣಕೀಕೃತ ಮೌಲ್ಯಮಾಪನ ಕಾರ್ಯ ಮುಗಿಸಿದ್ದು ತಾತ್ಕಾಲಿಕ ಆಯ್ಕೆಪಟ್ಟಿ ನೀಡಲಾಗಿದೆ. ಪ್ರಸ್ತುತ 1:2 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸೆಪ್ಟೆಂಬರ್ ಅಥವಾ ಅಕ್ಟೋಬರ್ನಲ್ಲಿ ಪ್ರಕಟಿಸಲಾಗುತ್ತದೆ. 1:1 ಮುಖ್ಯ / ಅಂತಿಮ ಆಯ್ಕೆಪಟ್ಟಿಯನ್ನು ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.