ನೆಲಮಂಗಲ:ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಜರುಗಿದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ನೆಲಮಂಗಲದ ಐವರನ್ನು ಐಸೋಲೇಷನ್ನಲ್ಲಿಟ್ಟು ನಿಗಾ ಇಡಲಾಗಿದೆ.
ನೆಲಮಂಗಲದ ಸಾರ್ವಜನಿಕ ಆಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿ ಇಡಲಾಗಿದ್ದ ಈ ಐವರು, ಮುಖಕ್ಕೆ ಮಾಸ್ಕ್ ಧರಿಸಿದೇ, ಸಾಮಾಜಿಕ ಅಂತರ ಕಾಪಾಡದೇ ಸೆಲ್ಫಿ ವಿಡಿಯೋ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯ ಆವ್ಯವಸ್ಥೆ ಮತ್ತು ಶಂಕಿತರ ದರ್ಬಾರ್ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.