ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ವ್ಯಕ್ತಿಯನ್ನು ಬಂಧಿಸುವಲ್ಲಿ ಬಾಗಲೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: ಆರೋಪಿ ಅರೆಸ್ಟ್ - ಬೆಂಗಳೂರು ಮಾದಕ ವಸ್ತು ಮಾರಾಟ
ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ವ್ಯಕ್ತಿಯನ್ನು ಬಂಧಿಸುವಲ್ಲಿ ಬಾಗಲೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿ ಆರೆಸ್ಟ್
ನೈಜೀರಿಯಾ ಮೂಲದ ಇಜಿಕ್ ನ್ಜೆಗ್ವೂ ಬಂಧಿತ ಆರೋಪಿ. ಈತ ಸಿಲಿಕಾನ್ ಸಿಟಿಯಲ್ಲಿ ಐಷಾರಾಮಿ ಜೀವನ ನಡೆಸಲು ಗಾಂಜಾ, ಕೊಕೇನ್ ಅನ್ನು ಶಾಲಾ - ಕಾಲೇಜು ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ. ಈ ಕುರಿತು ಮಾಹಿತಿ ಪಡೆದ ಬಾಗಲೂರು ಪೊಲೀಸರು, ಆತ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ. ಬಂಧಿತನಿಂದ 1ಕೆ.ಜಿ ಗಾಂಜಾ,19 ಗ್ರಾಂ ಕೊಕೇನ್, 2 ಮೊಬೈಲ್ ಹಾಗೂ ತೂಕದ ಯಂತ್ರ ವಶಕ್ಕೆ ಪಡೆದು ಕೊಂಡಿದ್ದಾರೆ.
ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.