ಬೆಂಗಳೂರು:ಹಿರಿಯಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಭಾಸ್ಕರ್ ರಾವ್ ಅವರೇ ದೃಢಪಡಿಸಿದ್ದಾರೆ.
ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಹೋಮ್ ಕ್ವಾರಂಟೈನ್ನಲ್ಲಿದ್ದೇನೆ. ನನ್ನ ಜೊತೆ ಸಂಪರ್ಕ ಹೊಂದಿದ್ದವರು ಟೆಸ್ಟ್ ಮಾಡಿಸಿ ಎಂದು ವಿನಂತಿಸಿಕೊಳ್ಳುತ್ತೇನೆ. ನನ್ನಿಂದ ಅನಾನುಕೂಲಗಳಾಗಿದ್ದರೆ ಕ್ಷಮಿಸಿ, ಸದ್ಯ ನಾನು ಆರೋಗ್ಯವಾಗಿದ್ದೇನೆ ಎಂದು ರೈಲ್ವೆ ಎಡಿಜಿಪಿ ಭಾಸ್ಕರ್ ರಾವ್ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ. ಈ ಮೊದಲು ಬೆಂಗಳೂರಿನ ಹಲವು ಪೊಲೀಸರಿಗೂ ಕೋವಿಡ್ ಸೋಂಕು ತಗುಲಿರುವುದು ವರದಿಯಾಗಿದೆ.