ಕರ್ನಾಟಕ

karnataka

ETV Bharat / city

ಯಾದವ ಸಮುದಾಯಕ್ಕಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಅಗತ್ಯ ಕ್ರಮ: ಬಿಎಸ್​ವೈ ಭರವಸೆ - ಶಾಸಕಿ ಪೂರ್ಣಿಮಾ ಶ್ರೀನಿವಾಸ್

ಯಾದವ ಸಮುದಾಯದ ಎಲ್ಲ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಯಾದವ ಸಮುದಾಯಕ್ಕಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

Separate development corporation for Yadava community

By

Published : Nov 10, 2019, 9:50 PM IST

Updated : Nov 10, 2019, 11:43 PM IST

ಬೆಂಗಳೂರು: ಯಾದವ ಸಮುದಾಯದ ಎಲ್ಲ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಸಮುದಾಯಕ್ಕಾಗಿ ಪ್ರತ್ಯೇಕ ಅಭಿವದ್ಧಿ ನಿಗಮ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಅಖಿಲ ಭಾರತ ಯಾದವ ಮಹಾಸಭಾ ಮತ್ತು ಕರ್ನಾಟಕ ಯಾದವ ಸಂಘ ಆಯೋಜಿಸಿದ್ದ ರಾಷ್ಟ್ರೀಯ ಕಾರ್ಯಾಕಾರಿ ಪರಿಷತ್​​ನ ಸಭೆಯಲ್ಲಿ ಮಾತನಾಡಿದ ಅವರು, ಬಾಣಸವಾಡಿಯಲ್ಲಿ ರಾಜ್ಯ ಯಾದವ ಸಮುದಾಯದ ಭವನ ನಿರ್ಮಾಣಕ್ಕೆ ₹3 ಕೋಟಿ ಬಿಡುಗಡೆ ಮಾಡಲಾಗುವುದು. ರಾಜ್ಯದಲ್ಲಿರುವ ಗೊಲ್ಲರ ಹಟ್ಟಿಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬಿಎಸ್​​ವೈ ಭಾಷಣದ ಸಂದರ್ಭದಲ್ಲಿ ತಮ್ಮ ಸಮುದಾಯದ ಶಾಸಕಿ ಪೂರ್ಣಿಮಾ ಶ್ರೀನಿವಾಸ್​​​ಗೆ ಸಚಿವ ಸ್ಥಾನ ನೀಡುವಂತೆ ಸಭೆಯಲ್ಲಿ ಜನರು ಒತ್ತಾಯಿಸಿದರು. ಸಭಿಕರನ್ನು ಗದರಿಸಿದ ಮುಖ್ಯಮಂತ್ರಿ, ಸುಮ್ಮನೆ ಇರಿ ಹಾಗೆಲ್ಲ. ಎಲ್ಲ ಭರವಸೆಗಳನ್ನು ನೀಡಲಾಗುವುದಿಲ್ಲ. ಸೂಕ್ತ ಸಂದರ್ಭದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​​ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿದರು.

Last Updated : Nov 10, 2019, 11:43 PM IST

ABOUT THE AUTHOR

...view details