ಬೆಂಗಳೂರು:ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಅಪರಾಧಿಯಾಗಿ ನಾಲ್ಕು ವರ್ಷಗಳ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ತಮಿಳುನಾಡಿನ ಚಿನ್ನಮ್ಮ ಖ್ಯಾತಿಯ ಶಶಿಕಲಾ ನಟರಾಜನ್ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶಶಿಕಲಾ ಆರೋಗ್ಯದಲ್ಲಿ ಏರುಪೇರು: ಚಿನ್ನಮ್ಮ ಲೇಡಿ ಕರ್ಜನ್ ಆಸ್ಪತ್ರೆಗೆ ದಾಖಲು - shashikala latest news
![ಶಶಿಕಲಾ ಆರೋಗ್ಯದಲ್ಲಿ ಏರುಪೇರು: ಚಿನ್ನಮ್ಮ ಲೇಡಿ ಕರ್ಜನ್ ಆಸ್ಪತ್ರೆಗೆ ದಾಖಲು shashikala natarajan](https://etvbharatimages.akamaized.net/etvbharat/prod-images/768-512-10311994-thumbnail-3x2-shashi.jpg)
15:51 January 20
ಶಶಿಕಲಾ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಂಗಳೂರಿನ ಲೇಡಿ ಕರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ರಾತ್ರಿಯಿಂದ ಉಸಿರಾಟ ತೊಂದರೆಯಿಂದ ಶಶಿಕಲಾ ಬಳಲುತ್ತಿದ್ದರು. ಇಂದೂ ಕೂಡಾ ಶಶಿಕಲಾ ಆರೋಗ್ಯ ಏರುಪೇರಾಗಿದ್ದರಿಂದ ಇಂದು ಬೆಳಗ್ಗೆ ಜೈಲಿನ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಲಾಗಿದ್ದು, ನಂತರ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಪೋತಿರೆಡ್ಡಿಪೇಟ TO ಶ್ವೇತಭವನ.. ಬೈಡನ್ ಭಾಷಣದ ಹಿಂದೆ ಭಾರತೀಯನ ಪಾತ್ರ..
ಪರಪ್ಪನ ಅಗ್ರಹಾರ ಜೈಲಿನ ವೈದ್ಯೆ ಉಮಾ ನೇತೃತ್ವದ ನಾಲ್ಕು ಜನರ ವೈದ್ಯರ ತಂಡವು ತಪಾಸಣೆ ನಡೆಸಿದ್ದು, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ವೈದ್ಯರು ಶಶಿಕಲಾ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಇದೇ ತಿಂಗಳ 27ರಂದು ಜೈಲಿನಿಂದ ಶಶಿಕಲಾ ಬಿಡುಗಡೆಯಾಗಲಿದ್ದಾರೆ.