ಕರ್ನಾಟಕ

karnataka

ETV Bharat / city

ಮನೆ ಮನೆ ಪ್ರಚಾರದಲ್ಲಿ ತೊಡಗಿದ ಕೈ ಅಭ್ಯರ್ಥಿ ರಿಜ್ವಾನ್ ಅರ್ಷದ್ - ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪ್ರಚಾರ

ಶಿವಾಜಿನಗರ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಇಂದು ಬೆಳಿಗ್ಗೆಯಿಂದಲೇ ಅಬ್ಬರದ ಪ್ರಚಾರ ಕೈಗೊಂಡಿದ್ದು, ವಸಂತ ನಗರ, ಶಿವಾಜಿನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಮನೆಗಳಿಗೆ ತೆರಳಿ ಮತಯಾಚನೆ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪ್ರಚಾರ

By

Published : Nov 23, 2019, 5:13 PM IST

ಬೆಂಗಳೂರು: ಶಿವಾಜಿನಗರ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಇಂದು ಬೆಳಗ್ಗೆಯಿಂದಲೇ ಅಬ್ಬರದ ಪ್ರಚಾರ ಕೈಗೊಂಡಿದ್ದು, ವಸಂತ ನಗರ, ಶಿವಾಜಿನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಮನೆಗಳಿಗೆ ತೆರಳಿ ಮತಯಾಚನೆ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪ್ರಚಾರ

ಈ ಟಿವಿ ಭಾರತದ ಜೊತೆ ಮಾತನಾಡಿದ ಅವರು, ಚುನಾವಣೆಗೆ ಇನ್ನು 15 ದಿನಗಳು ಸಮಯವಿದೆ. ಮುಂದಿನ ದಿನಗಳಲ್ಲಿ ನಮ್ಮ ಕಾಂಗ್ರೆಸ್​ನ ಹಿರಿಯ ನಾಯಕರು ನನ್ನ ಪರ ಪ್ರಚಾರ ಮಾಡುತ್ತಾರೆ. ಹಾಗೂ ಶಿವಾಜಿನಗರ ವ್ಯಾಪ್ತಿಯ ನಾಲ್ಕು ಕಾರ್ಪೊರೇಟರ್​ಗಳು ಕಾಂಗ್ರೆಸ್​ಗೆ ಕೈಕೊಟ್ಟು ಬಿಜೆಪಿ ಜೊತೆ ಗುರುತಿಸಿಕೊಂಡಿರುವುದಕ್ಕೆ ಹೈ ಕಮಾಂಡ್ ಕ್ರಮ ಕೈಗೊಳ್ಳುತ್ತದೆ. ಅಲ್ಲದೆ ಆ ಕಾರ್ಪೊರೇಟರ್​ಗಳು ಬಿಜೆಪಿ ಜೊತೆ ಗುರುತಿಸಿಕೊಂಡಿರುವುದು ಅನಿರೀಕ್ಷಿತವೇನಲ್ಲ, ರೋಶನ್ ಬೇಗ್ ಕಾಂಗ್ರೆಸ್ ಬಿಟ್ಟಿದ್ದ ದಿನದಿಂದಲೂ ಅವರ ಹಿಂಬಾಲ ಕಾರ್ಪೊರೇಟರ್​ಗಳು ಬಿಜೆಪಿ ಜೊತೆ ಗುರುತಿಸಿಕೊಂಡಿದ್ದರು. ಅವರಿಂದ ನನಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದರು.

ಇನ್ನು ಶಿವಾಜಿ ನಗರದ ಮತದಾರರ ಒಲವು ನನ್ನ ಕಡೆ ಇದೆ. ನಾನು ಭಾರಿ ಅಂತರದಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದರು.

ABOUT THE AUTHOR

...view details