ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನೆಲೆ ಕಳೆದ ಮಂಗಳವಾರ ಬೆಳಗ್ಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.
ಸಿದ್ದರಾಮಯ್ಯ ಸಂಪೂರ್ಣ ಗುಣಮುಖ; ಆಸ್ಪತ್ರೆಯಿಂದ ಡಿಸ್ಚಾರ್ಜ್ - ಬೆಂಗಳೂರು
ಕಳೆದ ಸೋಮವಾರ ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನೆಲೆ ಮಂಗಳವಾರ ಬೆಳಿಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಸಂಪೂರ್ಣವಾಗಿ ಗುಣಮುಖರಾಗಿ ಬಿಡುಗಡೆಯಾಗಿದ್ಧಾರೆ.

ಸಿದ್ದರಾಮಯ್ಯ
ಇದೀಗ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಆಸ್ಪತ್ರೆಯಿಂದ ಹೊರಟ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು. ಕಳೆದ ಸೋಮವಾರ ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನೆಲೆ ಮಂಗಳವಾರ ಬೆಳಗ್ಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಇವರೊಂದಿಗೆ ಪುತ್ರ ಹಾಗೂ ಶಾಸಕ ಡಾ. ಯತೀಂದ್ರ ಇದ್ದರು.
ಮೂರು ಬಾರಿ ಕೋವಿಡ್ ತಪಾಸಣೆಗೆ ಒಳಗಾಗಿದ್ದ ಅವರ ವರದಿ ನೆಗೆಟಿವ್ ಬಂದಿತ್ತು. ಜ್ವರ ಕಡಿಮೆಯಾದರೂ ಸಹ ಮೂರ್ನಾಲ್ಕು ದಿನ ಹೆಚ್ಚುವರಿಯಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದು ವಾಪಸಾಗಿದ್ದಾರೆ.