ಕರ್ನಾಟಕ

karnataka

ETV Bharat / city

ವಿಧಾನ ಪರಿಷತ್​ ಚುನಾವಣೆ : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಿದ್ದರಾಮಯ್ಯ, ಡಿಕೆಶಿ ಮತಯಾಚನೆ - ಕಾಂಗ್ರೆಸ್​ ವಿಧಾನ ಪರಿಷತ್​ ಚುನಾವಣೆ ಪ್ರಚಾರ

ನಾಲ್ಕು ದಿನಗಳ ಕಾಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮೂರು ದಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಧಾನ ಪರಿಷತ್​ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದು, ತಮ್ಮ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.

siddaramaiah-dk-shivakumar
ಸಿದ್ದರಾಮಯ್ಯ, ಡಿಕೆ ಶಿವಕುಮಾರ್​

By

Published : Dec 2, 2021, 8:37 PM IST

ಬೆಂಗಳೂರು: ಇಂದಿನಿಂದ ನಾಲ್ಕು ದಿನಗಳ ಕಾಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮೂರು ದಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿವಿಧ ಜಿಲ್ಲೆಗಳಲ್ಲಿ ಪರಿಷತ್​ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಇಂದು ಮಧ್ಯಾಹ್ನ ಬ್ಯಾಟರಾಯನಪುರದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ನಗರ ವಿಧಾನಪರಿಷತ್ ಚುನಾವಣೆ ಪ್ರಚಾರ ಕಾರ್ಯದಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿ, ಪಕ್ಷದ ಅಭ್ಯರ್ಥಿ ಕೆಜಿಎಫ್ ಬಾಬು ಪರ ಪ್ರಚಾರ ನಡೆಸಿದರು.

ಕಾಂಗ್ರೆಸ್​ ವಿಧಾನ ಪರಿಷತ್​ ಚುನಾವಣೆ ಪ್ರಚಾರ ವೇಳಾ ಪಟ್ಟಿ

ಇದಾದ ಬಳಿಕ ಚಿಕ್ಕಮಗಳೂರಿಗೆ ಪ್ರಯಾಣ ಬೆಳೆಸಿರುವ ಡಿಕೆಶಿ ಸಂಜೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆ ನಡೆಸಲಿದ್ದಾರೆ. ಉಭಯ ನಾಯಕರು ಚಿಕ್ಕಮಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದು, ಶುಕ್ರವಾರ ಬೆಳಗ್ಗೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಇದಾದ ಬಳಿಕ ಸಂಜೆ ಶಿವಮೊಗ್ಗಕ್ಕೆ ಆಗಮಿಸಿ ಅಲ್ಲಿ ತಮ್ಮ ಅಭ್ಯರ್ಥಿ ಪರ ಪ್ರಚಾರ ಕಾರ್ಯ ನಡೆಸಿ ಶಿವಮೊಗ್ಗದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ನಂತರ ಶನಿವಾರ ಬೆಳಗ್ಗೆ ತುಮಕೂರಿಗೆ ಬಂದು ವಿಧಾನಪರಿಷತ್ ಚುನಾವಣೆ ಪ್ರಯುಕ್ತ ಸ್ಥಳೀಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಮಾತನಾಡಲಿದ್ದಾರೆ. ಈ ಕಾರ್ಯಕ್ರಮದ ಬಳಿಕ ಇಬ್ಬರು ನಾಯಕರು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಕಾಂಗ್ರೆಸ್​ ವಿಧಾನ ಪರಿಷತ್​ ಚುನಾವಣೆ ಪ್ರಚಾರ ವೇಳಾ ಪಟ್ಟಿ

ಶನಿವಾರ ಸಂಜೆ ನಗರದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಕೆಪಿಸಿಸಿ ಅಧ್ಯಕ್ಷ ಭಾನುವಾರ ಬೆಳಗ್ಗೆ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ. ಹುಬ್ಬಳ್ಳಿಯಿಂದ ಮಧ್ಯಾಹ್ನ ಬೆಳಗಾವಿ ಜಿಲ್ಲೆಯ ರಾಯಬಾಗ ತಲುಪಲಿರುವ ಅವರು ಬೆಳಗಾವಿ ಪರಿಷತ್​​ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಈ ಪ್ರಚಾರಕಾರ್ಯದಲ್ಲಿ ಸಿದ್ದರಾಮಯ್ಯ ಸಹ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಆದರೆ, ಇದುವರೆಗೂ ಸಿದ್ದರಾಮಯ್ಯ ಭಾಗವಹಿಸುವ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

ಜನವರಿ ತಿಂಗಳಲ್ಲಿ ತೆರವಾಗುವ ವಿಧಾನಪರಿಷತ್ 25 ಸ್ಥಾನಗಳಿಗೆ ಬರುವ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ 13 ಅಭ್ಯರ್ಥಿಗಳ ಅವಧಿ ಮುಕ್ತಾಯವಾಗುತ್ತಿದ್ದು ವಿಶೇಷ. ಶತಾಯಗತಾಯ ಹೆಚ್ಚಿನ ಸ್ಥಾನಗಳನ್ನು ಗಳಿಸುವ ಪ್ರಯತ್ನದಲ್ಲಿರುವ ಕಾಂಗ್ರೆಸ್ ನಾಯಕರು ನಂತರ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ.

ABOUT THE AUTHOR

...view details