ಕರ್ನಾಟಕ

karnataka

ETV Bharat / city

ಸಿಎಂ ಗದ್ದುಗೆ ಏರಿದ್ದು ಹೇಗೆಂದು ಆತ್ಮಾವಲೋಕನ ಮಾಡಿಕೊಳ್ಳಿ: ಯಡಿಯೂರಪ್ಪಗೆ ಸಿದ್ದರಾಮಯ್ಯ ವ್ಯಂಗ್ಯ - ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ

ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದ್ದು, ಸಿದ್ದರಾಮಯ್ಯ ಅವರು ಕಾಲೆಳೆಯುವ ರೀತಿ ಟ್ವೀಟ್​​​ನಲ್ಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಶುಭಾಶಯ ಕೋರಿದ್ದಾರೆ.

Siddaramaiah, BS Yeddyurappa
ಸಿದ್ದರಾಮಯ್ಯ, ಬಿ.ಎಸ್​ಯಡಿಯೂರಪ್ಪ

By

Published : Jul 27, 2020, 10:59 PM IST

ಬೆಂಗಳೂರು:ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪೂರ್ಣಗೊಂಡ ವೇಳೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟಾಂಗ್​​ ಕೊಡುವ ಮೂಲಕ ಮುಖ್ಯಮಂತ್ರಿಗೆ ಶುಭಾಶಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಸಿದ್ದರಾಮಯ್ಯ ಅವರು, ಸಿಎಂ ಆಗುವ ಗುರಿ ತಲುಪಿ ವರ್ಷ ಕಳೆದ ಸಂಭ್ರಮದಲ್ಲಿ ಇದ್ದೀರಿ. ಇಂತಹ ಸಂದರ್ಭದಲ್ಲಿ ತುಸು ಬಿಡುವು ಮಾಡಿಕೊಂಡು, ಈ ಗುರಿ ಮುಟ್ಟಲು ಬಳಸಿದ ದಾರಿಯ ಬಗ್ಗೆ ಆತ್ಮ ಸಾಕ್ಷಿಯನ್ನು ಪ್ರಶ್ನೆ ಮಾಡಿಕೊಳ್ಳಿ. ನಿಮ್ಮ 'ಸಾಧನೆ'ಯ ಬಗ್ಗೆ ಮುಂದೆ ಮಾತನಾಡೋಣ ಎಂದಿದ್ದಾರೆ.

ಪರೋಕ್ಷವಾಗಿ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದ್ದರ ಬಗ್ಗೆ ಆತ್ಮಸಾಕ್ಷಿ ಪ್ರಶ್ನಿಸಿಕೊಳ್ಳಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ನಿರಂತರವಾಗಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಲೇ ಬಂದಿರುವ ಸಿದ್ದರಾಮಯ್ಯ ಇಂದು ಕೂಡ ವಾಗ್ದಾಳಿ ನಡೆಸಿದ್ದಾರೆ. ದಿನದ ಕೊನೆಯಲ್ಲಿ ಟ್ವೀಟ್ ಮಾಡಿ ಶುಭಾಶಯ ಸಲ್ಲಿಸಿ ಯಡಿಯೂರಪ್ಪ ಕಾಲೆಳೆದರು.

ABOUT THE AUTHOR

...view details