ಕರ್ನಾಟಕ

karnataka

ETV Bharat / city

ಲಾಕ್​ಡೌನ್ ಎಫೆಕ್ಟ್​: ಸಾಂಪ್ರದಾಯಿಕ ವೃತ್ತಿ ಅವಲಂಬಿತರ ಜೊತೆ ನಾಳೆ ಸಿದ್ದರಾಮಯ್ಯ ಸಭೆ - ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಭೆ

ರಾಜ್ಯದಲ್ಲಿ ಲಾಕ್​ಡೌನ್ ಹೇರಿಕೆಯಾಗಿ ಒಂದು ತಿಂಗಳು ಕಳೆದಿದೆ. ನಿತ್ಯದ ದುಡಿಮೆಯನ್ನು ಆಧರಿಸಿ ಬದುಕುತ್ತಿದ್ದ ಹಾಗೂ ಸಾಂಪ್ರದಾಯಿಕ ವೃತ್ತಿಯನ್ನು ಅವಲಂಬಿಸಿದವರ ಜೀವನ ದುಸ್ತರವಾಗಿದೆ. ಈ ಹಿನ್ನೆಲೆ ಇವರ ಸಮಸ್ಯೆ ಚರ್ಚಿಸಲು ಈ ನಾಳೆ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ

By

Published : Apr 27, 2020, 3:57 PM IST

ಬೆಂಗಳೂರು: ಲಾಕ್​ಡೌನ್ ಹಿನ್ನೆಲೆ ತೊಂದರೆಗೆ ಒಳಗಾಗಿರುವ ವಿವಿಧ ಕ್ಷೇತ್ರದ ಶ್ರಮಜೀವಿಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಾಳೆ ಮಹತ್ವದ ಸಭೆ ಕರೆದಿದ್ದಾರೆ.

ರಾಜ್ಯದಲ್ಲಿ ಲಾಕ್​ಡೌನ್ ಹೇರಿಕೆಯಾಗಿ ಒಂದು ತಿಂಗಳು ಕಳೆದಿದೆ. ನಿತ್ಯದ ದುಡಿಮೆಯನ್ನು ಆಧರಿಸಿ ಬದುಕುತ್ತಿದ್ದ ಹಾಗೂ ಸಾಂಪ್ರದಾಯಿಕ ವೃತ್ತಿಯನ್ನು ಅವಲಂಬಿಸಿದವರ ಜೀವನ ದುಸ್ತರವಾಗಿದೆ. ಈ ಹಿನ್ನೆಲೆ ಇವರ ಸಮಸ್ಯೆ ಬಗ್ಗೆ ಚರ್ಚಿಸಲು ಈ ಸಭೆ ಕರೆಯಲಾಗಿದೆ.

ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕರೆದಿರುವ ಸಭೆಯಲ್ಲಿ ಸವಿತಾ ಸಮಾಜದವರು, ಮಡಿವಾಳರು, ನೇಕಾರರು, ಕುಂಬಾರರು, ಕಮ್ಮಾರರು, ಚಮ್ಮಾರರು ಹಾಗೂ ಅಟೋ, ಟ್ಯಾಕ್ಸಿ ಚಾಲಕರು ಮತ್ತು ಬೀದಿ ಬದಿಯ ವ್ಯಾಪಾರಿಗಳ ಸಂಘಟನೆಯ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಈ ವರ್ಗದವರು ಎದುರಿಸುತ್ತಿರುವ ಸಮಸ್ಯೆಗಳು, ಅವರಿಗೆ ನೆರವು ಒದಗಿಸುವಂತೆ ಸರ್ಕಾರದ ಮೇಲೆ ಒತ್ತಡ ತರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ವಾರದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಸುದ್ದಿಗೋಷ್ಟಿ ಕರೆದು ಸಾಂಪ್ರದಾಯಿಕ ವೃತ್ತಿಯನ್ನು ಅವಲಂಬಿಸಿದವರ ಜೀವನ ಕೇಳುವವರಿಲ್ಲದಂತಾಗಿದೆ ಎಂದು ಹೇಳಿದ್ದರು. ಇದೀಗ ಸಿದ್ದರಾಮಯ್ಯ ಈ ಸಂಬಂಧ ಚರ್ಚಿಸಲು ಸಭೆ ಕರೆದಿದ್ದಾರೆ.

ABOUT THE AUTHOR

...view details