ಬೆಂಗಳೂರು : ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವುದಾಗಿ ಮೌಖಿಕವಾಗಿ ಭರವಸೆನೀಡಿದ್ದರು. ಆದರೆ ಪೌರ ಕಾರ್ಮಿಕರು ಲಿಖಿತ ರೂಪದಲ್ಲಿ ಆದೇಶ ಬರುವವರೆಗೂ ಪ್ರತಿಭಟನೆ ಮುಂದುವರೆಸೂವುದಾಗಿ ತಿಳಿಸಿದ್ದರು. ಇಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮುಷ್ಕರಕ್ಕೆ ತಮ್ಮ ಬೆಂಬಲ ಸೂಚಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದರು.
ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ವಿಚಾರದಲ್ಲಿ ಸರ್ಕಾರ ಬಾಯಿ ಮಾತಿನ ಭರವಸೆ ನೀಡಿದರೆ ಸಾಲದು, ಬೇಡಿಕೆಗಳನ್ನು ಈಡೇರಿಸಿ ಅಧಿಕೃತ ಆದೇಶ ಹೊರಡಿಸಬೇಕು. ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಬರವಣಿಗೆಯಲ್ಲಿ ಭರವಸೆ ನೀಡಿದೆ. ಆದರೆ ಅಧಿಕೃತ ಆದೇಶ ಹೊರಡಿಸಿಲ್ಲ. ಈ ರೀತಿ ಮೋಸ ಮಾಡದೆ ಕೂಡಲೇ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಒತ್ತಾಯಿಸುವುದಾಗಿ ತಿಳಿಸಿದರು.