ಕರ್ನಾಟಕ

karnataka

ETV Bharat / city

ನಳಿನ್ ಕುಮಾರ್ ಕಟೀಲ್ ನಕಲಿ ಶ್ಯಾಮ: ಸಿದ್ದರಾಮಯ್ಯ ತಿರುಗೇಟು - ಹಿಂದುಗಳ ಹತ್ಯೆ ವಿಚಾರ ಕುರಿತು ಸಿದ್ದರಾಮಯ್ಯ ಹೇಳಿಕೆ

ಹಿಂದುಳಿದ ವರ್ಗಗಳ ನಕಲಿ ನಾಯಕ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಅಲ್ಲದೆ ಪ್ರಶ್ನೆಗಳ ಸರಮಾಲೆಗಳನ್ನು ಕೇಳಿರುವ ಸಿದ್ದರಾಮಯ್ಯ ಹಿಂದೂಗಳ ಸಾವಿಗೆ ನೀವು ನ್ಯಾಯ ಯಾವಾಗ ಕೊಡಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

Siddaramaiah reaction for Naleen kumar kateel statement
ಸಿದ್ದರಾಮಯ್ಯ

By

Published : Aug 21, 2020, 8:14 PM IST

ಬೆಂಗಳೂರು: ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಕಲಿ ನಾಯಕ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣಕನ್ನಡದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು, ನಳಿನ್ ಕುಮಾರ್ ಕಟೀಲ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು, ಇಲ್ಲವೇ ಪಕ್ಷದಲ್ಲಿ ಈ ಮಟ್ಟದ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು ಎಂದು ಕಿಡಿ ಕಾರಿದ್ದಾರೆ.

ಇದನ್ನು ಓದಿ-ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಕಲಿ ಚಾಂಪಿಯನ್​: ನಳಿನ್ ಕುಮಾರ್ ಕಟೀಲ್ ಟೀಕೆ

ನಳಿನ್ ಕುಮಾರ್ ಕಟೀಲ್ ಅವರೇ, 2013-18ರ ಅವಧಿಯಲ್ಲಿ 24 ಹಿಂದುಗಳ ಹತ್ಯೆಯಾಗಿದೆ ಎಂದು ಹೇಳಿದ್ದೀರಿ. ಕೋಮು ಸಂಘರ್ಷದಲ್ಲಿ ಹತ್ಯೆಗೀಡಾದವರು 24 ಅಲ್ಲ, ಹಿಂದು-ಮುಸ್ಲಿಮ್ ಸೇರಿ ಒಟ್ಟು 45 ಜನ. ಈ ಪ್ರಕರಣಗಳನ್ನು ದಾಖಲೆ ಸಮೇತ ವಿವರಿಸಿ ನಮ್ಮ ಪಕ್ಷ ಪ್ರಕಟಿಸಿದ ಪುಸ್ತಕವನ್ನು ಓದಿ. ನಿಮ್ಮ ಮನಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ ಎಂದು ಟಾಂಗ್ ನೀಡಿದ್ದಾರೆ.

2013-18ರ ಅವಧಿಯಲ್ಲಿ ಕೋಮುಸಂಘರ್ಷದಲ್ಲಿ ಹತ್ಯೆಗೀಡಾಗಿದ್ದ 10 ಹಿಂದುಗಳ ಹತ್ಯೆಯ ಆರೋಪಿಗಳು ಎಸ್ ಡಿಪಿಐ, ಪಿಎಫ್ಐ ಸಂಘಟನೆಯವರಾದರೆ, 11 ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಬಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಯವರು. ಈಗ ಹೇಳಿ ಯಾವುದನ್ನು ನಿಷೇಧಿಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ನಿಮ್ಮ ಪಕ್ಷ ಕೇಂದ್ರ ಸರ್ಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆ ಪಾಟಲಿಗೀಡಾಗಿದ್ದು ನೆನಪಿದೆಯೇ?. ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನಿಮಗೆ, ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆಯ ಪ್ರಕರಣ ತನಿಖೆಯನ್ನು ಸಿಬಿಐ ನಡೆಸುತ್ತಿದೆ, ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಹಿಂದು ಪರೇಶ್ ಮೇಸ್ತನ ಕುಟುಂಬಕ್ಕೆ ನ್ಯಾಯ ಯಾವಾಗ ಕೊಡಿಸುವಿರಿ? ಎಂದು ಪ್ರಶ್ನಿಸಿದ್ದಾರೆ.

ಹಿಂದುಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನೀವು, ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್ ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳು ಯಾರೆಂದು ತಿಳಿಸುವಿರಾ?.

ಹಿಂದು ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುವಿರಾ?. ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯಕೊಡಿಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

For All Latest Updates

ABOUT THE AUTHOR

...view details