ಬೆಂಗಳೂರು: ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ಮತ್ತೆ ಸಾರ್ವತ್ರಿಕ ಚುನಾವಣೆ ಎದುರಾಗಲಿದೆ ಎಂದು ಕಾರ್ಯಕರ್ತರಿಗೆ ಸೂಚಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ ಮೂಲಕ ತಿಳಿಸಿದ್ದಾರೆ.
ಉಪಚುನಾವಣೆಗೆ ತಯಾರಾಗಿದ್ದೇವೆ, ಮಧ್ಯಂತರ ಚುನಾವಣೆಗೂ ತಯಾರಾಗಿ ಎಂದು ನಿನ್ನೆ ಮಂಗಳೂರಿನ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ನಮ್ಮ ಕಾರ್ಯಕರ್ತರಿಗೆ ಹೇಳಿದ್ದೇನೆ. ಈ ಸರ್ಕಾರ ನೋಡಿದ್ರೆ ಹೆಚ್ಚು ದಿನ ನಿಲ್ಲುವ ಹಾಗೆ ಕಾಣುತ್ತಿಲ್ಲ. ಅದಕ್ಕೆ ಡಿಸೆಂಬರ್ಗೆ ಸಾರ್ವತ್ರಿಕ ಚುನಾವಣೆ ಬರುತ್ತೆ, ಸಿದ್ಧರಾಗಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ಸರ್ಕಾರ ಪ್ರವಾಹ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಸಂತ್ರಸ್ತರಿಗೆ ₹ 10 ಸಾವಿರ ಪರಿಹಾರ ನೀಡುತ್ತಿದ್ದಾರೆ. ಅದು ಸಾಲದು, ಕನಿಷ್ಠ ಒಂದು ಲಕ್ಷ ಪರಿಹಾರ ನೀಡಬೇಕು. ಬರೀ ಭಾಷಣ ಮಾಡುವುದರಿಂದ ಸಂತ್ರಸ್ತರ ಕಷ್ಟ ದೂರವಾಗಲ್ಲ. ಸೂಕ್ತ ಪರಿಹಾರ ನೀಡಿ, ಪುನರ್ವಸತಿ ಕಲ್ಪಿಸಲಿ. ಇದು ಸರ್ಕಾರದ ಕರ್ತವ್ಯ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಹತ್ವ ಕೊಡಲ್ಲ:ಎಂಟಿಬಿ ನಾಗರಾಜ್ ಟೀಕೆಗೆ ನಾನು ಹೆಚ್ಚಿನ ಮಹತ್ವ ನೀಡುವುದಿಲ್ಲ. ಒಂದು ಸಾರಿ ನಾನು ಹೃದಯದಲ್ಲಿ ಇದ್ದೀನಿ ಎನ್ನುತ್ತಾರೆ. ಆಮೇಲೆ ನನ್ನನ್ನೇ ಟೀಕೆ ಮಾಡುತ್ತಾರೆ. ನನ್ನ ಜೊತೆಯಲ್ಲೇ ಇದ್ದು ನನಗೆ ದ್ರೋಹ ಮಾಡಿದ್ದಾರೆ. ಇಂಥವರ ನಾಟಕಗಳಿಗೆ ಜನರೇ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ನನಗಿದೆ ಎಂದರು.