ಕರ್ನಾಟಕ

karnataka

ETV Bharat / city

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಸಿದ್ದರಾಮಯ್ಯ ಬಣ ಗರಂ.. ಕಾದು ದಾಳ ಉರಿಳಿಸ್ತಾರಾ ಹುಲಿಯಾ !?

ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ, ಮುಂಬರುವ ದಿನಗಳಲ್ಲಿ ಇದು ಜನರಿಗೆ ತಿಳಿದರೆ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗಲಿದೆ. ಮುಂಬರುವ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸುತ್ತಿರುವ ನಾಯಕರಿಗೆ ಕೂಡಲೇ ತಾಕೀತು ಮಾಡುವಂತೆ ಡಿ ಕೆ ಶಿವಕುಮಾರ್ ಬಣದ ವಿರುದ್ಧ ಅವರು ಪಕ್ಷದ ರಾಷ್ಟ್ರೀಯ ನಾಯಕರ ಬಳಿ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ..

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್

By

Published : Mar 1, 2021, 11:43 AM IST

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಬಣ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಫುಲ್ ಗರಂ ಆಗಿದೆ.

ಕೆಪಿಸಿಸಿ ಅಧ್ಯಕ್ಷರ ನಿರ್ಧಾರಗಳಿಗೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಹೀಗೆ ಬಿಟ್ಟರೆ ನಮ್ಮನ್ನು ಮೂಲೆಗುಂಪು ಮಾಡುತ್ತಾರೆ ಎಂದು ಬೇಸರ ವ್ಯಕ್ತವಾಗುತ್ತಿದೆ. ಪಕ್ಷದಲ್ಲಿ ಏನೇ ತೀರ್ಮಾನ ತೆಗೆದುಕೊಂಡರು ನನ್ನ ಗಮನಕ್ಕೆ ಬರುತ್ತಿಲ್ಲ, ನಾನು ನಿಜಕ್ಕೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾ? ಎಂದು ಸಿದ್ದರಾಮಯ್ಯ ತಮ್ಮ ಆಪ್ತ ವಲಯದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಪಕ್ಷದ ಕೆಲ ಮುಖಂಡರು ಸಿದ್ದರಾಮಯ್ಯನವರಿಗೆ ಸಲಹೆ ನೀಡಿದ್ದು, ನೀವು ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಒನ್ ಮ್ಯಾನ್ ಶೋ ಆಗಲಿದೆ. ಇತ್ತೀಚೆಗೆ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಸಂಬಂಧಪಟ್ಟವರಿಂದ ಮಾಹಿತಿ ತರಿಸಿಕೊಳ್ಳಿ.

ತಾವು ಪಕ್ಷದ ಮೇಲಿನ ಹಿಡಿತ ತಪ್ಪಿಸಿಕೊಳ್ಳಬೇಡಿ. ಕಾಂಗ್ರೆಸ್​ನ ಬಹುತೇಕ ಶಾಸಕರು ನಿಮ್ಮ ಸಾಮರ್ಥ್ಯ ಅವಲಂಬಿಸಿದ್ದಾರೆ. ನೀವು ದುರ್ಬಲವಾಗಿದ್ದರೆ ಪಕ್ಷವು ದುರ್ಬಲವಾಗಲಿದೆ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

ಮೈಸೂರು ಪಾಲಿಕೆ ಚುನಾವಣೆ :ಮೈಸೂರು ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ವಿಚಾರ ನನ್ನ ಜೊತೆ ಚರ್ಚೆ ಮಾಡಿಲ್ಲ. ನನ್ನ ಅರಿವಿಗೆ ಬಾರದಂತೆ ನನ್ನ ಆಪ್ತ ವಲಯದಲ್ಲಿ ಇದ್ದವರು ಜೆಡಿಎಸ್ ಅಭ್ಯರ್ಥಿಯನ್ನು ಮೇಯರ್ ಆಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೊಂದೆಡೆ ಪುಲಿಕೇಶಿ‌ ನಗರದಲ್ಲಿ ಮಾಜಿ ಶಾಸಕ ಪ್ರಸನ್ನ ಕುಮಾರ್ ಸೇರ್ಪಡೆ ಬಗ್ಗೆಯೂ ಮಾಹಿತಿ ಕೊಟ್ಟಿಲ್ಲ.

ಎಲ್ಲ ಇವರಿಗೆ ಏನ್ ಬೇಕೋ ಅದನ್ನು ಮಾಡ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಮುಂದಿನ ಕಾರ್ಯತಂತ್ರ ಹಾಗೂ ಕೈಗೊಳ್ಳಬಹುದಾದ ದೃಢ ನಿರ್ಧಾರದ ಕುರಿತು ಚರ್ಚಿಸಿದ್ದಾರೆ. ಆಪ್ತರ ಜೊತೆ ಚರ್ಚಿಸಿದ ಸಂದರ್ಭದಲ್ಲಿ ತಮ್ಮ ವಿಶ್ವಾಸದಲ್ಲಿರುವ ಶಾಸಕರನ್ನು ಕರೆದು ಒಂದು ಸಭೆ ನಡೆಸುವ ಕುರಿತು ಚಿಂತನೆ ನಡೆಸಿದ್ದಾರೆ.

ಪ್ರತಿಪಕ್ಷ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ 2013ರಿಂದ 2018ರ ನಡುವೆ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಇದೀಗ ಆಪ್ತ ವಲಯದಲ್ಲಿ ಇವರೊಂದಿಗೆ ಯಾರು ಇದ್ದಾರೆ ಎನ್ನುವುದನ್ನು ಸ್ಪಷ್ಟಪಡಿಸಿಕೊಳ್ಳಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಈಗಾಗಲೇ ಸಿದ್ದು ಆಪ್ತರು ಕಾರ್ಯಪ್ರವೃತ್ತರಾಗಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್​ ಸುರ್ಜೇವಾಲಾ ಪುತ್ರನ ವಿವಾಹಕ್ಕೆ ತೆರಳಿದ್ದ ಸಂದರ್ಭ ಅಲ್ಲಿಗೆ ಆಗಮಿಸಿದ್ದ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಹಿಂದೆ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿದ್ದ ಕೆ ಸಿ ವೇಣುಗೋಪಾಲ್ ಮತ್ತಿತರ ನಾಯಕರ ಬಳಿ ಸಿದ್ದರಾಮಯ್ಯ ಹಾಗೂ ಅವರ ಆಪ್ತರು ತಮ್ಮ ಗೋಳು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ, ಮುಂಬರುವ ದಿನಗಳಲ್ಲಿ ಇದು ಜನರಿಗೆ ತಿಳಿದರೆ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗಲಿದೆ. ಮುಂಬರುವ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸುತ್ತಿರುವ ನಾಯಕರಿಗೆ ಕೂಡಲೇ ತಾಕೀತು ಮಾಡುವಂತೆ ಡಿ ಕೆ ಶಿವಕುಮಾರ್ ಬಣದ ವಿರುದ್ಧ ಅವರು ಪಕ್ಷದ ರಾಷ್ಟ್ರೀಯ ನಾಯಕರ ಬಳಿ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇನ್ನು, ಇತ್ತೀಚಿನ ದಿನಗಳಲ್ಲಿ ಕೈಗೊಳ್ಳುತ್ತಿರುವ ಕೆಲವು ನಿರ್ಧಾರಗಳಲ್ಲಿ ತಮ್ಮನ್ನ ಕಡೆಗಣಿಸುತ್ತಿರುವ ಬಗ್ಗೆ ಕಳೆದ ವಾರ ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯನವರು ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಸೇರಿ ಹಲವು ನಾಯಕರಿಗೆ ದೂರು ಸಲ್ಲಿಸಿದ್ದರು.

ಇದಾದ ಬಳಿಕ ಯಾವುದೇ ನಿರೀಕ್ಷಿತ ಬೆಳವಣಿಗೆಗಳು ರಾಜ್ಯದಲ್ಲಿ ನಡೆಯದಿರುವ ಹಿನ್ನೆಲೆ ಮದುವೆ ನೆಪದಲ್ಲಿ ಮತ್ತೊಮ್ಮೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದಿದ್ದಾರೆ ಎನ್ನಲಾಗಿದೆ.

ABOUT THE AUTHOR

...view details