ಬೆಂಗಳೂರು: ತಮ್ಮ ಹುಟ್ಟುಹಬ್ಬಕ್ಕೆ ಶುಭ ಕೋರಿದ ನಾಯಕರಿಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಧನ್ಯವಾದ ಸಲ್ಲಿಸಿದ್ದಾರೆ.
ಹುಟ್ಟುಹಬ್ಬಕ್ಕೆ ಶುಭ ಕೋರಿದವರಿಗೆ ಧನ್ಯವಾದ ಸಲ್ಲಿಸಿದ ಸಿದ್ದರಾಮಯ್ಯ - Siddaramaiah birthday
73ನೇ ವರ್ಷಕ್ಕೆ ಕಾಲಿಟ್ಟಿರುವ ಸಿದ್ದರಾಮಯ್ಯ ಅವರಿಗೆ ಹಲವಾರು ಗಣ್ಯರು ಪಕ್ಷಾತೀತವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಶುಭ ಕೋರಿದ ಎಲ್ಲರಿಗೂ ಅವರು ಧನ್ಯವಾದ ಸಲ್ಲಿಸಿದ್ದಾರೆ.
ವಿವಿಧ ರಾಜಕೀಯ ಪಕ್ಷದ ನಾಯಕರು, ಸಮಾಜದ ಮುಖಂಡರು, ಧಾರ್ಮಿಕ ಮುಖಂಡರು, ಬೆಂಬಲಿಗರು, ಅಭಿಮಾನಿಗಳು ನನ್ನ ಹುಟ್ಟುಹಬ್ಬಕ್ಕೆ ಶುಭಾಶಯ ಸಲ್ಲಿಸಿದ್ದು, ಅತೀವ ಸಂತಸ ತಂದಿದೆ. ಶುಭ ಕೋರಿದ ಎಲ್ಲರಿಗೂ ಧನ್ಯವಾದ ಸಲ್ಲಿಸುವುದಾಗಿ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಪಾಲರಾದ ಬಂಡಾರು ದತ್ತಾತ್ರೇಯ, ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ, ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಸಿದ್ದಗಂಗಾ ಮಠಾಧೀಶರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಶಾಮನೂರು ಶಿವಶಂಕರಪ್ಪ, ಆರ್.ಎಲ್.ಜಾಲಪ್ಪ ಸೇರಿದಂತೆ ಹಲವು ಸಚಿವರು, ಶಾಸಕರು, ಸಿದ್ದರಾಮಯ್ಯರಿಗೆ ಶುಭಾಶಯ ಕೋರಿದ್ದು, ಶೀಘ್ರ ಗುಣಮುಖರಾಗುವಂತೆಯೂ ಹಾರೈಸಿದ್ದರು.