ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರವನ್ನು ಟೀಕಿಸಿದ ಹಿನ್ನೆಲೆ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರನ್ನ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.
ತಮ್ಮದು 'ದುರ್ಯೋಧನ ಸರ್ಕಾರ' ಎಂದು ಬಿಜೆಪಿ ಸಾಬೀತುಪಡಿಸಿದೆ: ಸಿದ್ದರಾಮಯ್ಯ - ಸಾಹಿತಿ ಹಂ ಪ ನಾಗರಾಜಯ್ಯ ಪೊಲೀಸ್ ತನಿಖೆ
ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ ಪೊಲೀಸರ ಕೃತ್ಯ ಖಂಡನೀಯ. ಈ ಮೂಲಕ ರಾಜ್ಯ ಬಿಜೆಪಿ ಸರ್ಕಾರ ತಮ್ಮದು 'ದುರ್ಯೋದನ ಸರ್ಕಾರ' ಎಂದು ಸಾಬೀತುಪಡಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಹೊರಟಿರುವ ಬಿ.ಎಸ್.ಯಡಿಯೂರಪ್ಪ ಅವರ ಗೋಮುಖವ್ಯಾಘ್ರ ಮುಖ ಬಯಲಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಟ್ವೀಟ್ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಅವರು, ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ ಅವರನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ ಪೊಲೀಸರ ಕೃತ್ಯ ಖಂಡನೀಯ. ಈ ಮೂಲಕ ರಾಜ್ಯ ಬಿಜೆಪಿ ಸರ್ಕಾರ ತಮ್ಮದು 'ದುರ್ಯೋಧನ ಸರ್ಕಾರ' ಎಂದು ಸಾಬೀತುಪಡಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಹೊರಟಿರುವ ಬಿ.ಎಸ್.ಯಡಿಯೂರಪ್ಪ ಅವರ ಗೋಮುಖವ್ಯಾಘ್ರ ಮುಖ ಬಯಲಾಗಿದೆ ಎಂದಿದ್ದಾರೆ.
ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯರನ್ನ ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಆಕ್ಷೇಪಿಸಿದ್ದು, ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.