ಬೆಂಗಳೂರು: ಮಹಾನಗರದ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಬಿಜೆಪಿ ಸರ್ಕಾರ ತೀವ್ರ ನಿರ್ಲಕ್ಷ್ಯ ತೋರಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. 8 ವಾರಗಳಲ್ಲಿ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಆರಂಭಿಸಿ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡುತ್ತಿದ್ದಂತೆ ರಾಜ್ಯ ಸರ್ಕಾರ ಚುನಾವಣೆಗೆ ಸಿದ್ಧತೆ ಶುರು ಮಾಡಿದೆ. ಈ ವಿಚಾರವಾಗಿ ಸರ್ಕಾರದ ವಿರುದ್ಧ ದಿಲ್ಲಿಯಲ್ಲಿರುವ ಸಿದ್ದರಾಮಯ್ಯ ಟ್ವೀಟ್ ಮೂಲಕ ಟೀಕೆ ಮಾಡಿದ್ದಾರೆ.
ನಮ್ಮ ಸರ್ಕಾರವಿದ್ದಾಗ ಬೆಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗೆ 1,217 ಕೋಟಿ ರೂ. ಅನುದಾನ ನೀಡಿದ್ದೆವು. ಕಳೆದ ಬಜೆಟ್ನಲ್ಲಿ ಬಿಜೆಪಿ ಸರ್ಕಾರ ಬೆಂಗಳೂರಿಗೆ 1,500 ಕೋಟಿ ರೂ. ಘೋಷಣೆ ಮಾಡಿದ್ದು ಬಿಟ್ಟರೆ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಪಾಪ ಮಾಡಿದವರು ಯಾರಪ್ಪ ಆರ್.ಅಶೋಕ್? ಎಂದು ಪ್ರಶ್ನಿಸಿದ್ದಾರೆ.