ಕರ್ನಾಟಕ

karnataka

ETV Bharat / city

ರಾಜ್ಯದ ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ಹೋಗುವ ಮುನ್ನ ಸಿಎಂ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ - Siddaramaiah tweet

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್​ ಮೂಲಕ ತಮ್ಮ ಆಕ್ರೊಶ ಹೊರಹಾಕಿದ್ದಾರೆ.

CM Basavaraja bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By

Published : Apr 5, 2022, 3:58 PM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯದ ಹಿತಾಸಕ್ತಿ ಮತ್ತು ಜನರ ಭವಿಷ್ಯದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ಹೋಗುವ ಮುನ್ನ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಳಿತು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ, ರಾಜ್ಯ ಸರ್ಕಾರ ಸಮಾಜದ ಕೋಮು ಸಾಮರಸ್ಯ ಕದಡುವಂತಹ ಘಟನೆಗಳಿಗೆ ಕುಮ್ಮಕ್ಕು ನೀಡುವ ಮೂಲಕ ರಾಜಕೀಯ ಲಾಭ ಪಡೆಯುವ ಹವಣಿಕೆಯಲ್ಲಿದೆ. ಈ ಲೆಕ್ಕಾಚಾರವೇ ಮುಂದೆ ಬಿಜೆಪಿಗೆ ತಿರುಗುಬಾಣವಾಗಲಿದೆ ಎಂದು‌ ಕಿಡಿಕಾರಿದ್ದಾರೆ.

ಮಂದಿರ, ಮಸೀದಿ, ಚರ್ಚ್ ಎಲ್ಲ ಕಡೆಗಳಲ್ಲಿ ಧ್ವನಿ ವರ್ಧಕಗಳನ್ನು ಹಾಕುತ್ತಾರೆ. ಇದರಿಂದ ಇಷ್ಟು ದಿನ ಯಾರಿಗೆ ತೊಂದರೆ ಆಗಿತ್ತು?. ಕಣ್ಣೆದುರೇ ಸಮಾಜದ ಸಾಮರಸ್ಯ ಕುಸಿದು ಬೀಳುತ್ತಿದ್ದರೂ ಅದಕ್ಕೆ ಕಾರಣವಾದ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗದಷ್ಟು ಸಿಎಂ ಅವರು ಅಸಮರ್ಥರೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ನಾನೇನು ಸನ್ಯಾಸಿಯಲ್ಲ, ಅವಕಾಶ ಕೇಳಿದ್ದೇನೆ, ಕೊಟ್ಟರೆ ನಿಭಾಯಿಸುತ್ತೇನೆ: ರೇಣುಕಾಚಾರ್ಯ

ದಿನೇ ದಿನೆ ರಾಜ್ಯದಲ್ಲಿ ಇಷ್ಟೊಂದು ಅಶಾಂತಿ, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದರೂ ಈ ಬಗ್ಗೆ ಮಾತನಾಡದ ಸಿಎಂ ಬೊಮ್ಮಾಯಿ ಅವರದ್ದು ಈ ಎಲ್ಲಾ ಸಮಾಜ ವಿರೋಧಿ ಕೃತ್ಯಗಳಿಗೆ ಸಹಮತವೋ ಅಥವಾ ಕಾನೂನು ಕ್ರಮ ಜರುಗಿಸಲಾಗದ ಅಸಹಾಯಕತೆಯೋ? ಎಂದು ಪ್ರಶ್ನಿಸಿದ್ದಾರೆ.

ABOUT THE AUTHOR

...view details