ಬೆಂಗಳೂರು:ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಅವರು ಇದನ್ನೇ ಮುಂದುವರೆಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದ ಬಿಎಸ್ವೈಗೆ ಸಿದ್ದರಾಮಯ್ಯ ತಿರುಗೇಟು - ಬಿಎಸ್ ವೈಗೆ ಟ್ವೀಟ್ ಮೂಲಕ ಸಿದ್ದರಾಮಯ್ಯ ತಿರುಗೇಟು
ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಅವರು ಇದನ್ನೇ ಮುಂದುವರೆಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಮ್ಮ ಜನ ಶಾಂತಿಪ್ರಿಯರು, ನ್ಯಾಯಾಲಯ ಕಾನೂನಿನ ಬಗ್ಗೆ ಗೌರವ-ನಿಷ್ಠೆ ಉಳ್ಳವರಾಗಿದ್ದಾರೆ. ಒಡೆಯುವವರು, ಬೆಂಕಿ ಹಚ್ಚುವವರು ನಿಮ್ಮ ಪಕ್ಷದಲ್ಲಿ ಹೆಚ್ಚಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರೇ, ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡದೆ ನಿಷೇಧಾಜ್ಞೆ ಹೇರಿ ನೀವು ಕನ್ನಡಿಗರನ್ನು ಅವಮಾನಿಸಿದ್ದೀರಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದ ನಿಮ್ಮ ಪಕ್ಷಕ್ಕೆ ದೇಶದಲ್ಲಿ ನಡೆದ ಅಹಿಂಸಾತ್ಮಕ ಸ್ವಾತಂತ್ರ್ಯ ಹೋರಾಟದ ಬಗ್ಗೆ ತಿಳಿದಿರಲಾರದು. ಗಾಂಧಿ, ನೆಹರೂ ಮತ್ತು ಪಟೇಲ್ ಸೇರಿದಂತೆ ಎಲ್ಲರೂ ಬ್ರಿಟಿಷರ ವಿರುದ್ಧ ಹೋರಾಟ ಮಡಿದವರು. ಹೋರಾಟದ ಪರಂಪರೆಗೆ ತಡೆಯೊಡ್ಡಬೇಡಿ. ಪ್ರತಿಭಟನೆ, ಪ್ರತಿರೋಧ, ಚಳುವಳಿಗಳೆಲ್ಲ ಆರೋಗ್ಯಪೂರ್ಣ ಪ್ರಜಾಪ್ರಭುತ್ವದ ಲಕ್ಷಣಗಳು. ಇದು ಹಿಟ್ಲರ್ನ ಜರ್ಮನಿ ಅಲ್ಲ, ಗಾಂಧೀಜಿಯವರ ಭಾರತ ಎಂದು ತಿರುಗೇಟು ನೀಡಿದ್ದಾರೆ.
ಬಿ.ಎಸ್.ಯಡಿಯೂರಪ್ಪನವರೇ, ನೀವು ಪಕ್ಷದ ಗುಲಾಮರಾಗಬೇಡಿ ಆತ್ಮಸಾಕ್ಷಿಗೆ ಕಿವಿಕೊಡಿ, ನಿಮ್ಮ ಪೌರತ್ವ ತಿದ್ದುಪಡಿ ಕಾಯ್ದೆಯ ಜನಹಿತದ ಬಗ್ಗೆ ಅಷ್ಟೊಂದು ಭರವಸೆ ಇದ್ದಿದ್ದರೆ ಪ್ರತಿಭಟನೆಗೆ ಯಾಕೆ ಹೆದರುತ್ತಿದ್ದೀರಿ, ಪ್ರಧಾನಿ ನರೇಂದ್ರ ಮೋದಿ ಅವರೇ? ಜನಾಭಿಪ್ರಾಯ ಆಲಿಸಿ, ಅವರಿಗೆ ಮನವರಿಕೆ ಮಾಡಿಕೊಡಿ ಎಂದು ಟ್ವೀಟ್ ಮಾಡಿದ್ದಾರೆ.
TAGGED:
Siddaramaiah tweeted to BSY