ಕರ್ನಾಟಕ

karnataka

ETV Bharat / city

ಅತೃಪ್ತ ಶಾಸಕರಿಗೆ ಟ್ವಿಟರ್​​​​​​​​​​​​​​​​ ಮೂಲಕ ಸಂದೇಶ ರವಾನಿಸಿದ ಸಿದ್ದರಾಮಯ್ಯ - tweet

ಬಿಜೆಪಿಯ ಆಮಿಷಗಳಿಗೆ ಬಲಿಯಾಗದೆ ರಾಜೀನಾಮೆ ವಾಪಸ್ಸು ಪಡೆಯಿರಿ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಟ್ವಿಟರ್ ಮೂಲಕ ಮೈತ್ರಿ ಪಕ್ಷದ ಅತೃಪ್ತ ಶಾಸಕರಿಗೆ ಸಂದೇಶ ರವಾನಿಸಿದ್ದಾರೆ

sid

By

Published : Jul 8, 2019, 5:44 PM IST

ಬೆಂಗಳೂರು: ಮುಂಬೈನಲ್ಲಿರುವ ಮೈತ್ರಿ ಪಕ್ಷದ ಅತೃಪ್ತ ಶಾಸಕರಿಗೆ ಟ್ವಿಟರ್ ಮೂಲಕ ಸಂದೇಶ ರವಾನಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ನಿಮ್ಮ ಸಮಸ್ಯೆಗಳನ್ನು ಆಲಿಸಿ ತಕ್ಷಣವೇ ಪರಿಹಾರ ನೀಡುತ್ತೇವೆ. ಮಂತ್ರಿಮಂಡಲ ಪುನಾರಚನೆ ಮಾಡುತ್ತಿದ್ದೇವೆ. ರಾಜೀನಾಮೆ ವಾಪಾಸ್​ ಪಡೆಯಿರಿ ಎಂದು ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಮತ್ತೊಮ್ಮೆ ತನ್ನ ಪ್ರಯತ್ನದಲ್ಲಿ ವಿಫಲವಾಗಲಿದೆ ಎಂದಿದ್ದಾರೆ.

ಮಾಜಿ ಸಿಎಂ ಸಿದ್ಧರಾಮಯ್ಯ ಕಳೆದ ಒಂದು ಗಂಟೆಯಲ್ಲಿ ಮೂರು ಟ್ವೀಟ್ ಮಾಡಿದ್ದು, ಅವು ಹೀಗಿವೆ.


"ಮಂತ್ರಿ ಸ್ಥಾನದಿಂದ ವಂಚಿತರಾದ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವ ಶಾಸಕರು ಬಿಜೆಪಿಯ ಆಮಿಷಗಳಿಗೆ ಬಲಿಯಾಗದೆ ರಾಜೀನಾಮೆ ವಾಪಸ್​ ಪಡೆಯಿರಿ, ನಿಮ್ಮ ಸಮಸ್ಯೆಗಳನ್ನು ಆಲಿಸಿ ತಕ್ಷಣ ಪರಿಹಾರ ಮಾಡುತ್ತೇವೆ ಎಂದು ಪಕ್ಷದ ಪರವಾಗಿ ನಾನು ಮನವಿ ಮಾಡುತ್ತಿದ್ದೇನೆ. ನಾವು ಈಗಾಗಲೇ ಮಂತ್ರಿಮಂಡಲ ಪುನಾರಚನೆ ನಿರ್ಧಾರಕ್ಕೆ ಸಹ ಬಂದಿದ್ದೇವೆ"

ಸಿದ್ದರಾಮಯ್ಯ ಟ್ವೀಟ್
"ಬಿಜೆಪಿಗೆ ಪ್ರಜಾಪ್ರಭುತ್ವ ಹಾಗೂ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆಯಿಲ್ಲ. ಅವರಿಗೆ ಸ್ಪಷ್ಟ ಬಹುಮತವೂ ಇಲ್ಲ, ಬೇರೆ ಪಕ್ಷಗಳ ಬೆಂಬಲವೂ ಇಲ್ಲ. ಆದರೂ ಸಹ ಅಸಂವಿಧಾನಿಕ ಮಾರ್ಗದ ಮೂಲಕ ಶಾಸಕರನ್ನು ತನ್ನತ್ತ ಸೆಳೆದುಕೊಂಡು ಸರ್ಕಾರ ರಚಿಸುವ ವಿಫಲ ಯತ್ನಕ್ಕೆ ಕೈ ಹಾಕಿದೆ. ಇದೂ ಸಹ ಹಿಂದಿನಂತೆ ಯಶಸ್ವಿಯಾಗುವುದಿಲ್ಲ"
ಸಿದ್ದರಾಮಯ್ಯ ಟ್ವೀಟ್
"ಕೇಂದ್ರ ಸರ್ಕಾರ ತನ್ನ ಅಂಗ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಾಮಮಾರ್ಗದ ಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಇಳಿದಿದೆ. ಇದರ ಹಿಂದೆ ರಾಜ್ಯ ಬಿಜೆಪಿ ನಾಯಕರಷ್ಟೇ ಅಲ್ಲ ಕೇಂದ್ರದ ಕೈವಾಡ ಕೂಡ ಸ್ಪಷ್ಟವಾಗಿದೆ. ಈ ಬಾರಿಯ ಪ್ರಯತ್ನದಲ್ಲಿ ಬಿಜೆಪಿ ತನ್ನ ಕೈವಾಡವೇ ಇಲ್ಲ ಎಂಬ ಹೊಸ ನಾಟಕ ಶುರು ಮಾಡಿದೆ ಅಷ್ಟೆ"
ಸಿದ್ದರಾಮಯ್ಯ ಟ್ವೀಟ್

ABOUT THE AUTHOR

...view details