ಕರ್ನಾಟಕ

karnataka

ಸೋಮವಾರ ದಿಲ್ಲಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ: ವರಿಷ್ಠರ ಭೇಟಿ, ಸಮಾಲೋಚನೆ

By

Published : Jul 17, 2021, 6:31 PM IST

ಹೈಕಮಾಂಡ್ ನಾಯಕರು ಸಿದ್ದರಾಮಯ್ಯಗೆ ದಿಲ್ಲಿಗೆ ಬರುವಂತೆ ಬುಲಾವ್ ಕಳುಹಿಸಿದ್ದು, ಈ ಸಂದರ್ಭ ನಾಯಕತ್ವ ವಿಚಾರ ಪ್ರಸ್ತಾಪ ಹಾಗೂ ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ಸಾಂಘಿಕ ಪ್ರಯತ್ನ ನಡೆಸುವುದು ಸೇರಿದಂತೆ ಹಲವು ವಿಚಾರಗಳಲ್ಲಿ ಸ್ಪಷ್ಟನೆ ನೀಡಿ ಕಳುಹಿಸುವ ಸಾಧ್ಯತೆ ಇದೆ.

siddaramaiah-visits-delhi-monday
ಸೋಮವಾರ ದಿಲ್ಲಿಗೆ ವಿಪಕ್ಷ ನಾಯುಕ ಸಿದ್ದರಾಮಯ್ಯ ಪ್ರಯಾಣ, ವರಿಷ್ಠರ ಭೇಟಿ

ಬೆಂಗಳೂರು: ಹೈಕಮಾಂಡ್ ಆಹ್ವಾನದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. ಸೋಮವಾರ ಸಂಜೆ ದೆಹಲಿಗೆ ತೆರಳಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿರುವ ಸಿದ್ದರಾಮಯ್ಯ ಮಂಗಳವಾರ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಈ ಬಾರಿ ಭೇಟಿ ಸಂದರ್ಭ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್​ ಸುರ್ಜೆವಾಲಾ ಹಾಗೂ ಇತರ ಹಿರಿಯ ನಾಯಕರನ್ನು ಭೇಟಿಯಾಗಿ ಸಮಾಲೋಚಿಸಲಿದ್ದಾರೆ ಎಂಬ ಮಾಹಿತಿ ಇದೆ.

ವರಿಷ್ಠರ ಭೇಟಿ ಮಾಡಿ ಬಂದಿರುವ ಡಿಕೆಶಿ

ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದಿಲ್ಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿ ವಾಪಸಾಗಿದ್ದಾರೆ. ಮುಂಬರುವ ದಿನಗಳಲ್ಲಿ ಪಕ್ಷದ ಸಂಘಟನೆ ಹಾಗೂ ನಡೆಯಲಿರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಸಂಬಂಧ ಸುದೀರ್ಘ ಸಮಾಲೋಚನೆ ನಡೆಸಿ ಬಂದಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ನಡೆಯುತ್ತಿರುವ ಚರ್ಚೆಯ ಕುರಿತು ಸಹ ಮಾಹಿತಿ ನೀಡಿದ್ದಾರೆ.

ಮುನಿಯಪ್ಪ, ಬಿ ಕೆ ಹರಿಪ್ರಸಾದ್​​​ರಿಂದಲೂ ಲಾಬಿ

ಇದರ ಬೆನ್ನಲ್ಲೇ ದಲಿತ ಸಿಎಂ ಕೂಗು ಕೂಡ ರಾಜ್ಯದಲ್ಲಿ ಎದ್ದಿದ್ದು, ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ದಿಲ್ಲಿಗೆ ತೆರಳಿ ಲಾಬಿ ನಡೆಸಿದ್ದಾರೆ. ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹಲವು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಕೂಡಲೇ ಇಂತಹ ಹೇಳಿಕೆ ನೀಡದಂತೆ ಸೂಚನೆ ನೀಡಲು ಹೈಕಮಾಂಡ್ ಸಿದ್ದರಾಮಯ್ಯಗೆ ಸೂಚಿಸಿತ್ತು. ಇದರ ಹಿನ್ನೆಲೆ ತಮ್ಮ ವಿಚಾರವನ್ನು ಪ್ರಸ್ತಾಪಿಸಿದಂತೆ ಸಿದ್ದರಾಮಯ್ಯ ತಿಳಿಸಿದ್ದರು. ಇದಾದ ನಂತರವೂ ಕೆಲ ಮುಖಂಡರು ಸಿದ್ದರಾಮಯ್ಯ ಪರ ದನಿ ಎತ್ತಿದ್ದರು.

ಇದನ್ನೂ ಓದಿ:High command ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಸೂಚಿಸಿಲ್ಲ: 26ಕ್ಕೆ ಶಾಸಕಾಂಗ ಪಕ್ಷದ ಸಭೆ

ಈ ಸಂದರ್ಭದಲ್ಲಿ ಹೈಕಮಾಂಡ್ ನಾಯಕರು ಸಿದ್ದರಾಮಯ್ಯಗೆ ದಿಲ್ಲಿಗೆ ಬರುವಂತೆ ಬುಲಾವ್ ಕಳಿಸಿದ್ದು, ಈ ಸಂದರ್ಭ ನಾಯಕತ್ವ ವಿಚಾರ ಪ್ರಸ್ತಾಪ ಹಾಗೂ ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ಸಾಂಘಿಕ ಪ್ರಯತ್ನ ನಡೆಸುವುದು ಸೇರಿದಂತೆ ಹಲವು ವಿಚಾರಗಳಲ್ಲಿ ಸ್ಪಷ್ಟನೆ ನೀಡಿ ಕಳುಹಿಸುವ ಸಾಧ್ಯತೆ ಇದೆ.

ಮುಂಬರುವ ದಿನಗಳಲ್ಲಿ ಎದುರಾಗುವ ವಿಧಾನಸಭೆ ಉಪಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂದಿನ ವಿಧಾನಸಭೆ ಚುನಾವಣೆ ಮುಕ್ತಾಯದವರೆಗೂ ಯಾವುದೇ ಕಾರಣಕ್ಕೂ ನಾಯಕತ್ವ ವಿಚಾರ ಪ್ರಸ್ತಾಪಿಸಿದಂತೆ ತಮ್ಮ ಬೆಂಬಲಿಗರಿಗೆ ಸೂಚಿಸುವಂತೆಯೂ ಹೇಳುವ ಸಾಧ್ಯತೆ ಇದೆ.

ABOUT THE AUTHOR

...view details