ಬೆಂಗಳೂರು: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯೊಬ್ಬರನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿ ಆರೋಪಿಗಳು ತಲೆಮರೆಸಿಕೊಂಡಿರುವ ಘಟನೆ ಶುಕ್ರವಾರ ತಡರಾತ್ರಿ ದಕ್ಷಿಣ ವಿಭಾಗದ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯ ವಿದ್ಯಾಪೀಠ ಸರ್ಕಲ್ನ ವಿನಾಯಕ ನಗರದಲ್ಲಿ ನಡೆದಿದೆ.
ಯಶೋದಮ್ಮ (75) ಕೊಲೆಯಾದವರು. ದುಷ್ಕರ್ಮಿಗಳು ವೃದ್ಧೆಯನ್ನ ಕೊಂದು, ಆಕೆಯ ಬಳಿ ಇದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಮಾಹಿತಿ ನೀಡಿದರು.