ಕರ್ನಾಟಕ

karnataka

ETV Bharat / city

ಆತ್ಮ ನಿರ್ಭರ ಭಾರತ್​​​ನ ಎರಡನೇ ದಿನದ ಘೋಷಣೆಗಳ ಬಗ್ಗೆ ಸಿಎಂ ಬಿಎಸ್​ವೈ ಹೇಳಿದ್ದೇನು?

ಪ್ರಧಾನಿ ಮೋದಿ ಘೋಷಿಸಿರುವ ಆತ್ಮ ನಿರ್ಭರ ಭಾರತ ಅಭಿಯಾನ ಪ್ಯಾಕೇಜ್​ ಎರಡನೇ ದಿನದ ಘೋಷಣೆಗಳ ಬಗ್ಗೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.

cm bsy
ಸಿಎಂ ಬಿಎಸ್​ವೈ

By

Published : May 14, 2020, 10:04 PM IST

Updated : May 15, 2020, 12:01 AM IST

ಬೆಂಗಳೂರು:ಆತ್ಮ ನಿರ್ಭರ ಭಾರತ್ ಆರ್ಥಿಕ ಪುನಶ್ಚೇತನ ಯೋಜನೆಯ ಎರಡನೇ ದಿನದ ಘೋಷಣೆಗಳು ಪ್ರಧಾನಿ ಮೋದಿ ಅವರಿಗೆ ಬಡವರ ಬಗ್ಗೆ ಇರುವ ಕಾಳಜಿಯನ್ನು ಬಿಂಬಿಸುತ್ತವೆ. ಅಲ್ಲದೆ ಎಲ್ಲರನ್ನೊಳಗೊಂಡ ಪ್ರಗತಿಯ ಆಶಯವನ್ನು ದೃಢಪಡಿಸುತ್ತದೆ ಎಂದು ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ವಲಸೆ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಸಣ್ಣ ರೈತರು, ಕೂಲಿ ಕಾರ್ಮಿಕರು ಸೇರಿದಂತೆ ಎಲ್ಲಾ ಸಮುದಾಯಗಳಿಗೆ ಮೂಲ ಸೌಲಭ್ಯ ಮತ್ತು ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳು ಶ್ಲಾಘನೀಯ. ರಾಜ್ಯ ಮತ್ತು ಪ್ರಾಂತೀಯ ವಲಯದಲ್ಲಿ ಇರುವ ಕನಿಷ್ಠ ವೇತನ ತಾರತಮ್ಯವನ್ನು ತೆಗೆದು ಹಾಕುವುದು, ತಮ್ಮ ಊರುಗಳಿಗೆ ಹಿಂದಿರುಗಿದ ವಲಸೆ ಕಾರ್ಮಿಕರಿಗೆ ವರದಾನವಾಗಲಿದೆ ಎಂದರು.

ಸಿಎಂ ಬಿಎಸ್​ವೈ
ವಲಸಿಗ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದಿದ್ದರೂ 3500 ಕೋಟಿ ರೂ. ವೆಚ್ಚದಲ್ಲಿ ಉಚಿತ ಪಡಿತರ ವಿತರಣೆ, ವಲಸೆ ಕಾರ್ಮಿಕರಿಗೆ ಮನೆ ಬಾಡಿಗೆ ದರ ನಿಗದಿ ಮೊದಲಾದ ಕ್ರಮಗಳು ಅವರಿಗೆ ಹೆಚ್ಚಿನ ಭದ್ರತೆ ನೀಡಲಿದೆ. ಮುದ್ರಾ ಶಿಶು ಸಾಲ ಯೋಜನೆಗೆ ಬಡ್ಡಿ ರಿಯಾಯಿತಿ, ಬೀದಿಬದಿ ವ್ಯಾಪಾರಿಗಳಿಗೆ 10 ಸಾವಿರ ರೂ.ವರೆಗೆ ವಿಶೇಷ ಸಾಲ ಸೌಲಭ್ಯ ಒದಗಿಸಲು 5 ಸಾವಿರ ಕೋಟಿ ಅನುದಾನ ನಿಗದಿ ಪಡಿಸಿರುವುದು ಬೀದಿಬದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ ಎಂದರು.ಮಧ್ಯಮ, ಕೆಳ ಮಧ್ಯಮ ವರ್ಗದವರಿಗೆ ಗೃಹ ಸಾಲ ಸಬ್ಸಿಡಿ ಯೋಜನೆಗೆ 70 ಸಾವಿರ ಕೋಟಿ ರೂ. ನೆರವು ಈ ವರ್ಗದ ಜನರ ಕನಸು ಸಾಕಾರಗೊಳಿಸಲು ನೆರವಾಗಲಿದೆ. ಸಣ್ಣ ಮತ್ತು ಮಧ್ಯಮ ರೈತರಿಗೆ ಬೆಳೆ ಕೊಯ್ಲು ಮತ್ತು ಕೊಯ್ಲೋತ್ತರ ನಿರ್ವಹಣೆಗೆ ರೈತ ನಿಧಿಗೆ ಹೆಚ್ಚುವರಿ 30 ಸಾವಿರ ಕೋಟಿ ರೂ. ಸೇರ್ಪಡೆ ಮಾಡಲಾಗಿದೆ. ಸಣ್ಣ ರೈತರು, ಪಶುಪಾಲಕರು ಮತ್ತು ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಅಡಿ 2 ಲಕ್ಷ ಕೋಟಿ ಸಾಲ ಸೌಲಭ್ಯ ನೀಡುವ ಕ್ರಮಗಳು ಸಂಕಷ್ಟಕ್ಕೊಳಗಾದ ಈ ವಲಯಗಳ ಜನರಿಗೆ ಉಸಿರು ನೀಡಿದೆ ಎಂದು ವಿವರಿಸಿದರು.ನಾವು ತರಕಾರಿ, ಹಣ್ಣುಗಳಿಗೆ 137 ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದೇವೆ. ಪವರ್ ಲೂಮ್ಸ್​​ನಲ್ಲಿ ಕೆಲಸ ಮಾಡುವವರಿಗೆ 2 ಸಾವಿರ ರೂ. ನೀಡುತ್ತಿದ್ದೇವೆ. ಒಟ್ಟು 162 ಕೋಟಿ ರೂ. ಹೆಚ್ಚುವರಿ ಪ್ಯಾಕೇಜ್ ಘೋಷಣೆ ಮಾಡಿದ್ದೇವೆ. ನಾಳೆ ರೈತರಿಗೆ ಕೇಂದ್ರ ಯಾವ ಘೋಷಣೆ ಮಾಡುತ್ತೆ ನೋಡುತ್ತೇವೆ. ಬಳಿಕ ನಾವು ಘೋಷಣೆ ಮಾಡುತ್ತೇವೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
Last Updated : May 15, 2020, 12:01 AM IST

ABOUT THE AUTHOR

...view details